ರವಿ ಕನ್ಯಾ ರಾಶಿಯಲ್ಲಿ, ಚಂದ್ರ ಧನು ರಾಶಿಯಲ್ಲಿ ಸಂಚಾರ: ದಿನ ಭವಿಷ್ಯ ಇಲ್ಲಿದೆ

Updated on: Sep 19, 2026 | 6:17 AM

ಟಿವಿ9 ಡಿಜಿಟಲ್ ವಾಹಿನಿಯ 19 ಸೆಪ್ಟೆಂಬರ್ 2026ರ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಶನಿವಾರದ ಮಹತ್ವ, ಗ್ರಹಗತಿಗಳು, ರಾಹುಕಾಲ, ಶುಭಕಾಲ ಹಾಗೂ ಮೇಷ, ವೃಷಭ, ಮಿಥುನ ರಾಶಿಗಳ ವೈಯಕ್ತಿಕ ಭವಿಷ್ಯ, ಆರೋಗ್ಯ, ಆರ್ಥಿಕ ಸ್ಥಿತಿ, ಉದ್ಯೋಗ, ವಿದ್ಯೆ, ಪ್ರೀತಿ ಮತ್ತು ಪರಿಹಾರೋಪಾಯಗಳ ಬಗ್ಗೆ ಸಮಗ್ರ ಮಾಹಿತಿ ನೀಡಿದ್ದಾರೆ.

ಇಂದು 19 ಸೆಪ್ಟೆಂಬರ್ 2026, ಶನಿವಾರ, ಪರಾಭವನಾಮ ಸಂವತ್ಸರ, ದಕ್ಷಿಣಾಯನ, ಭಾದ್ರಪದ ಮಾಸ, ವರ್ಷ ಋತು, ಶುಕ್ಲ ಪಕ್ಷ ಅಷ್ಟಮಿ, ಮೂಲ ನಕ್ಷತ್ರ, ಆಯುಷ್ಮಾನ್ ಯೋಗ ಮತ್ತು ಭವಕರಣ ಇದ್ದು, ಈ ದಿನದ ರಾಹುಕಾಲ 9 ಗಂಟೆ 11 ನಿಮಿಷದಿಂದ 10 ಗಂಟೆ 42 ನಿಮಿಷದ ತನಕ ಇರುತ್ತದೆ. ಸರ್ವಸಿದ್ಧಿ, ಸಂಕಲ್ಪ ಹಾಗೂ ಶುಭಕಾಲ ಮಧ್ಯಾಹ್ನ 1 ಗಂಟೆ 44 ನಿಮಿಷದಿಂದ 3 ಗಂಟೆ 15 ನಿಮಿಷದ ತನಕ ಇರುತ್ತದೆ. ರವಿ ಕನ್ಯಾ ರಾಶಿಯಲ್ಲಿ, ಚಂದ್ರ ಧನುಸ್ ರಾಶಿಯ ಮೂಲ ನಕ್ಷತ್ರ ಕೇತುವಿನ ನಕ್ಷತ್ರದಲ್ಲಿ ಸಂಚಾರ ಮಾಡುತ್ತಾರೆ. ಈ ದಿನದ ರಾಶಿ ಭವಿಷ್ಯವನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಇಲ್ಲಿ ವಿವರಿಸಿದ್ದಾರೆ.

Loading...
Unable to load recommendations.
Follow Us
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More