ಏಕಾಏಕಿ ಹೈವೇಗೆ ನುಗ್ಗಿದ ಬೈಕ್, ಕಾರು ಡಿಕ್ಕಿಯಾಗಿ ಫುಟ್ಬಾಲ್ನಂತೆ ಹಾರಿ ಬಿದ್ದ ಸವಾರರು: ಭಯಾನಕ ದೃಶ್ಯ ಸಿಸಿಟಿವಿಲಿ ಸೆರೆ
ಬೈಕ್ ಸವಾರರ ಅಜಾಗರೂಕತೆ, ನಿರ್ಲಕ್ಷ್ಯದಿಂದಾಗಿ ಮಂಗಳೂರಿನ ಸುರತ್ಕಲ್ನಲ್ಲಿ ಭೀಕರ ಅಪಘಾತ ಸಂಭವಿಸಿದೆ. ವೇಗವಾಗಿ ಸಾಗುತ್ತಿದ್ದ ಕಾರು, ಏಕಾಏಕಿ ಹೆದ್ದಾರಿಗೆ ನುಗ್ಗಿದ ಬೈಕ್ಗೆ ಗುದ್ದಿದ ಕಾರಣ ಬೈಕ್ ಸವಾರರು ಫುಟ್ಬಾಲ್ನಂತೆ ಎಸೆಯಲ್ಪಟ್ಟಿದ್ದಾರೆ. ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಒಬ್ಬ ಸವಾರ ಅಪಾಯದಿಂದ ಪಾರಾಗಿದ್ದಾನೆ. ಘಟನೆಯ ಭಯಾನಕ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಮಂಗಳೂರು, ಫೆಬ್ರವರಿ 6: ಬೈಕೊಂದರಲ್ಲಿ ತ್ರಿಬಲ್ ರೈಡ್ ಹೋಗುತ್ತಿದ್ದ ಯುವಕರು ಏಕಾಏಕಿ ರಾಷ್ಟ್ರೀಯ ಹೆದ್ದಾರಿಗೆ ನುಗ್ಗಿದ ಪರಿಣಾಮ ಹೆದ್ದಾರಿಯಲ್ಲಿ ವೇಗವಾಗಿ ಸಾಗುತ್ತಿದ್ದ ಕಾರು ಡಿಕ್ಕಿಯಾಗಿ ಭಾರೀ ಅವಘಡ ಸಂಭವಿಸಿದೆ. ಮಂಗಳೂರು ಹೊರವಲಯದ ಸುರತ್ಕಲ್ ಬಳಿಯ ಸೂರಜ್ ಹೊಟೇಲ್ ಬಳಿ ಘಟನೆ ನಡೆದಿದ್ದು, ಯುವಕರು ಹೆಲ್ಮೆಟ್ ಕೂಡ ಧರಿಸದೇ ನಿರ್ಲಕ್ಷ್ಯದಿಂದ ಬೈಕ್ನಲ್ಲಿ ತ್ರಿಬಲ್ ರೈಡ್ ಮಾಡುತ್ತಿದ್ದರು. ಈ ವೇಳೆ ಕಾರು ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸವಾರರು ಫುಟ್ಬಾಲ್ನಂತೆ ಹಾರಿ ಬಿದ್ದಿದ್ದಾರೆ. ಕಾರು ಡಿಕ್ಕಿಯ ರಭಸಕ್ಕೆ ಓರ್ವ ಅಪಾಯದಿಂದ ಪಾರಾಗಿದ್ದು, ಉಳಿದ ಇಬ್ಬರ ಸ್ಥಿತಿ ಗಂಭೀರವಾಗಿದೆ.
Follow Us
Latest Videos
ಮುಂದಿನ 30 ದಿನಗಳಲ್ಲಿ 56,432 ಹುದ್ದೆ ಭರ್ತಿಗೆ ಅನುಮೋದನೆ
ಯುವಕನ ಶವ ತಂದು ಹೆದ್ದಾರಿಯಲ್ಲಿ ಹಾಕಿದ್ದ ಕೇಸ್: ಕೊಲೆ ರಹಸ್ಯ ಬಿಚ್ಚಿಟ್ಟ SP
ಅಧಿಕಾರ ಹಂಚಿಕೆ ತಿಕ್ಕಾಟ ಮಧ್ಯೆ ಬೆಂಗಳೂರಿನಲ್ಲಿ ರಾಬರ್ಟ್ ವಾದ್ರ ಪ್ರತ್ಯಕ್ಷ
9 ರೂ 34 ಪೈಸೆ ಸಾಲಕ್ಕಾಗಿ ಬೆನ್ನುಬಿದ್ದ ಬ್ಯಾಂಕ್ಗೆ ಚಳಿ ಬಿಡಿಸಿದ ಗ್ರಾಹಕ
