ಭೀಕರ ಅಪಘಾತ: ಡಿಕ್ಕಿ ರಭಸಕ್ಕೆ ಎರಡು ಪೀಸ್ ಆದ ಟೆಂಪೊ, EXCLUSIVE ದೃಶ್ಯ
ಬೆಂಗಳೂರಿನ ಜ್ಞಾನಭಾರತಿ ರಿಂಗ್ ರಸ್ತೆಯ ರಾಮಸಂದ್ರ ಬ್ರಿಡ್ಜ್ ಬಳಿ ಭೀಕರ ಅಪಘಾತ ಸಂಭವಿಸಿದೆ. ಬ್ಯಾಡರಹಳ್ಳಿಯಿಂದ ಕೆಂಗೇರಿ ಕಡೆಗೆ ಹೋಗುತ್ತಿದ್ದ ಟೆಂಪೋ ಡಿವೈಡರ್‌ಗೆ ಡಿಕ್ಕಿ ಹೊಡೆದು ಎರಡು ತುಂಡುಗಳಾಗಿ ಬ್ರಿಡ್ಜ್‌ನಿಂದ ಕೆಳಗೆ ಬಿದ್ದಿದೆ. ಟೆಂಪೋದಲ್ಲಿದ್ದ ಮೂವರಿಗೆ ಗಂಭೀರ ಗಾಯಗಳಾಗಿವೆ. ಎಕ್ಸ್‌ಕ್ಲೂಸಿವ್ ಸಿಸಿಟಿವಿ ದೃಶ್ಯ ನೋಡಿ.
ಬೆಂಗಳೂರು, ಜುಲೈ 06: ನಗರದಲ್ಲಿ ಬೆಚ್ಚಿ ಬೀಳ್ಳುವ ಅಪಘಾತ (accident) ಒಂದು ಸಂಭವಿಸಿದೆ. ಇದ್ದಕ್ಕಿದ್ದಂತೆ ಬಲಭಾಗದ ಡಿವೈಡರ್‌ಗೆ ಟೆಂಪೊ ಡಿಕ್ಕಿ ಹೊಡೆದು ಎರಡು ಪೀಸ್ ಆಗಿ ಬ್ರಿಡ್ಜ್‌ನಿಂದ ಕೆಳಗೆ ಬಿದ್ದಿರುವಂತಹ ಘಟನೆ ಜ್ಙಾನಭಾರತಿ ರಿಂಗ್ ರಸ್ತೆಯ ರಾಮಸಂದ್ರ ಬ್ರಿಡ್ಜ್ ಬಳಿ ನಡೆದಿದೆ. ಜುಲೈ 5 ರಂದು ಮಧ್ಯಾಹ್ನ 1 ಗಂಟೆಗೆ ಬ್ಯಾಡರಹಳ್ಳಿ ಕಡೆಯಿಂದ ಕೆಂಗೇರಿ ಕಡೆಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಟೆಂಪೊದಲ್ಲಿ ಇದ್ದ ಮೂವರಿಗೆ ಗಾಯಗಳಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಜ್ಙಾನಭಾರತಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.