AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು: ಭೀಕರ ದೃಶ್ಯ ಸೆರೆ

ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು: ಭೀಕರ ದೃಶ್ಯ ಸೆರೆ

ಸುರೇಶ ನಾಯಕ
| Edited By: |

Updated on: Apr 03, 2026 | 1:52 PM

Share

ಬೀದರ್ ಜಿಲ್ಲೆಯ ಭಾಲ್ಕಿ ಪಟ್ಟಣದಲ್ಲಿ ರಸ್ತೆ ಗುಡಿಸುತ್ತಿದ್ದ ಜ್ಞಾನಬಾಯಿ ಎಂಬ ಮಹಿಳೆಯ ಮೇಲೆ ಪೊಲೀಸ್ ಕಾನ್ಸ್‌ಟೇಬಲ್ ಕಾರು ಹರಿದಿದೆ. ಗಂಭೀರವಾಗಿ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲಾಗಿದ್ದು, ಅಪಘಾತದ ಮತ್ತು ಸ್ಥಳದಲ್ಲಿದ್ದ ಬಾಲಕನ ಆಕ್ರಂದನದ ಕರುಳು ಹಿಂಡುವಂತಿರುವ ದೃಶ್ಯ ಸಿಸಿ ಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಬೀದರ್​​, ಏಪ್ರಿಲ್​​ 03: ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಪೊಲೀಸ್​​ ಕಾನ್ಸ್​ಟೇಬಲ್​ ಕಾರು ಹರಿದಿರುವ ಘಟನೆ ಬೀದರ್ ಜಿಲ್ಲೆಯ ಭಾಲ್ಕಿ ಪಟ್ಟಣದಲ್ಲಿ ನಡೆದಿದೆ. ಅಪಘಾತದಲ್ಲಿ ಭಾಲ್ಕಿ ಪಟ್ಟಣದ ನಿವಾಸಿ ಜ್ಞಾನಬಾಯಿ(45) ಸ್ಥಿತಿ ಗಂಭೀರವಾಗಿದ್ದು, ಪಟ್ಟಣದ ರಸ್ತೆಯಲ್ಲಿ ಕಸ ಗುಡಿಸುತ್ತಿದ್ದ ವೇಳೆ ವೇಗವಾಗಿ ಬಂದ ಮೇಹಕರ್ ಪೊಲೀಸ್ ‌ಠಾಣೆಯ ಪಿಸಿ ಉಮಾಕಾಂತ್ ಕಾರು ಮಹಿಳೆ ಮೇಲೆ ಹರಿದಿದೆ. ಗಂಭೀರ ಗಾಯಗೊಂಡ ಜ್ಞಾನಬಾಯಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದ್ದು, ಭಾಲ್ಕಿ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪಘಾತದ ಮತ್ತು ಸ್ಥಳದಲ್ಲಿದ್ದ ಬಾಲಕನ ಆಕ್ರಂದನದ ಕರುಳು ಹಿಂಡುವಂತಿರುವ ದೃಶ್ಯ ಸಿಸಿ ಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us
Suresh Naik
Suresh Naik

ಸುರೇಶ ನಾಯಕ ಮೂಲತಃ, ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಮೇಲ್ಮನಹಟ್ಟಿ ಗ್ರಾಮದರು. ಓದಿದ್ದು ಪತ್ರಿಕೋದ್ಯಮದಲ್ಲಿ ಡಿಪ್ಲೋಮಾ ಪದವಿ ಹಾಗೂ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 2009 ರಿಂದ ಅಂದರೆ ಕಳೆದ 16 ವರ್ಷದಿಂದ ದೃಷ್ಯ ಮಾಧ್ಯಮ ಕ್ಷೇತ್ರದಲ್ಲಿದ್ದು ಸಮಯ ಸುದ್ದಿ ವಾಹಿನಿಯ ಇನ್ ಪೂಟ್ ವಿಭಾಗದಲ್ಲಿ, ಜೊತೆಗೆ ಕಸ್ತೂರಿ ಸುದ್ದಿವಾಹಿನಿಯ ಹುಬ್ಬಳ್ಳಿ ವರದಿಗಾರನಾಗಿ ನಾಲ್ಕು ವರ್ಷ ಕೆಲಸ ಮಾಡಿದ ಅನುಭವವಿದೆ. 2014 ಪೆಬ್ರುವರಿ 01 ರಿಂದ ಟಿವಿ9 ಸುದ್ದಿವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, 10 ವರ್ಷ ಪೂರೈಸಿದ್ದಾರೆ. ಟಿವಿ9 ನ ಆರಂಭದಲ್ಲಿ ಬಾಗಲಕೋಟೆ ಜಿಲ್ಲೆಯ ವರದಿಗಾರನಾಗಿ ಸಧ್ಯ ಬೀದರ್ ಜಿಲ್ಲೆಯ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಕೃಷಿ, ಮಾನವೀಯ ಕಳಕಳಿಯ ವರದಿ, ರೈತರ ಸಮಸ್ಯೆಗಳ ಕುರಿತು ಹೆಚ್ಚಿನ ಒತ್ತು ಕೊಟ್ಟು ತಮ್ಮ ಸುದ್ದಿಯ ಮೂಲಕ ನೊಂದವರಿಗೆ ನ್ಯಾಯ ಕೊಡಿಸುವ ಕೆಲಸ ಮಾಡಿದ್ದಾರೆ. ಕಾಡು ಸುತ್ತೋದು, ಸಂಗೀತ ಕೇಳೋದು, ಇವರ ಹವ್ಯಾಸವಾಗಿದೆ...

Read More