ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ಬೆಚ್ಚಿಬೀಳಿಸುವ ವಿಡಿಯೋ ವೈರಲ್
ಉತ್ತರ ಪ್ರದೇಶದ ಬಂಗಾರ್ಮೌ ಪೊಲೀಸ್ ಠಾಣೆ ಪ್ರದೇಶದಲ್ಲಿ ಬುಧವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಅದೃಷ್ಟವಶಾತ್, ಪಿಕಪ್ನಲ್ಲಿದ್ದ ಇತರ 9 ಮಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಪಘಾತವು ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಸಂಭವಿಸಿದ್ದು, ಆ್ಯಕ್ಸಿಡೆಂಟ್ನ ಭಯಾನಕ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ. ಭೀಕರ ಅಪಘಾತದ ವಿಡಿಯೋ ಇಲ್ಲಿದೆ ನೋಡಿ.
ಉನ್ನಾವೊ, ಮಾರ್ಚ್ 4: ಉತ್ತರ ಪ್ರದೇಶದ ಉನ್ನಾವೊದ ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ ಭೀಕರ ಅಪಘಾತ ಸಂಭವಿಸಿದೆ. ಬಂಗಾರ್ಮೌ ಪೊಲೀಸ್ ಠಾಣೆ ಪ್ರದೇಶದ ಗಹರ್ ಪೂರ್ವಾ ಗ್ರಾಮದ ಬಳಿ ಅತಿ ವೇಗವಾಗಿ ಬಂದ ಪಿಕಪ್ ನಿಯಂತ್ರಣ ತಪ್ಪಿ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಅವಘಡ ಸಂಭವಿಸಿದೆ. ಪಿಕಪ್ ಚಾಲಕ ಮತ್ತು 3 ವರ್ಷದ ಬಾಲಕಿ ಅಪಘಾತದಲ್ಲಿ ದಾರುಣವಾಗಿ ಮೃತಪಟ್ಟಿದ್ದಾರೆ. ಪಿಕಪ್ನಲ್ಲಿದ್ದ 9 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾದ ಭಯಾನಕ ವಿಡಿಯೋ ಇಲ್ಲಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ


