ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ಬೆಚ್ಚಿಬೀಳಿಸುವ ವಿಡಿಯೋ ವೈರಲ್

Updated on: Mar 04, 2026 | 5:43 PM

ಉತ್ತರ ಪ್ರದೇಶದ ಬಂಗಾರ್ಮೌ ಪೊಲೀಸ್ ಠಾಣೆ ಪ್ರದೇಶದಲ್ಲಿ ಬುಧವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಅದೃಷ್ಟವಶಾತ್, ಪಿಕಪ್​ನಲ್ಲಿದ್ದ ಇತರ 9 ಮಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಪಘಾತವು ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಸಂಭವಿಸಿದ್ದು, ಆ್ಯಕ್ಸಿಡೆಂಟ್​ನ ಭಯಾನಕ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ. ಭೀಕರ ಅಪಘಾತದ ವಿಡಿಯೋ ಇಲ್ಲಿದೆ ನೋಡಿ.

ಉನ್ನಾವೊ, ಮಾರ್ಚ್​ 4: ಉತ್ತರ ಪ್ರದೇಶದ ಉನ್ನಾವೊದ ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ ಭೀಕರ ಅಪಘಾತ ಸಂಭವಿಸಿದೆ. ಬಂಗಾರ್ಮೌ ಪೊಲೀಸ್ ಠಾಣೆ ಪ್ರದೇಶದ ಗಹರ್ ಪೂರ್ವಾ ಗ್ರಾಮದ ಬಳಿ ಅತಿ ವೇಗವಾಗಿ ಬಂದ ಪಿಕಪ್ ನಿಯಂತ್ರಣ ತಪ್ಪಿ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಅವಘಡ ಸಂಭವಿಸಿದೆ. ಪಿಕಪ್ ಚಾಲಕ ಮತ್ತು 3 ವರ್ಷದ ಬಾಲಕಿ ಅಪಘಾತದಲ್ಲಿ ದಾರುಣವಾಗಿ ಮೃತಪಟ್ಟಿದ್ದಾರೆ. ಪಿಕಪ್​ನಲ್ಲಿದ್ದ 9 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾದ ಭಯಾನಕ ವಿಡಿಯೋ ಇಲ್ಲಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More