ಚಿತ್ರದುರ್ಗ ಭೀಕರ ಬಸ್ ಅಪಘಾತ: ಬಸ್ ಚಾಲಕ, ನಿರ್ವಾಹಕ ಗ್ರೇಟ್ ಎಸ್ಕೇಪ್

Edited By:

Updated on: Dec 25, 2025 | 8:26 AM

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಬಳಿ ಭೀಕರ ಬಸ್ ಅಪಘಾತ ಸಂಭವಿಸಿದೆ. ಲಾರಿ ಡಿಕ್ಕಿ ಹೊಡೆದ ಪರಿಣಾಮ ಸೀಬರ್ಡ್ ಸ್ಲೀಪರ್ ಕೋಚ್ ಬಸ್ ಹೊತ್ತಿ ಉರಿದಿದೆ. ಈ ದುರ್ಘಟನೆಯಲ್ಲಿ 9ಕ್ಕೂ ಹೆಚ್ಚು ಮಂದಿ ಸಜೀವ ದಹನವಾಗಿದ್ದು, ಚಾಲಕ ಮತ್ತು ನಿರ್ವಾಹಕ ಹೊರಗೆ ಜಿಗಿದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಲಾರಿ ಚಾಲಕ ಮೃತಪಟ್ಟಿದ್ದಾನೆ.

ಚಿತ್ರದುರ್ಗ, ಡಿಸೆಂಬರ್ 25: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕನಿಷ್ಠ 9 ಮಂದಿ ಸಜೀವ ದಹನವಾಗಿದ್ದಾರೆ. ಬೆಂಗಳೂರಿನಿಂದ ಗೋಕರ್ಣಕ್ಕೆ ಹೊರಟಿದ್ದ ಸೀಬರ್ಡ್ ಸ್ಲೀಪರ್ ಕೋಚ್ ಬಸ್‌ಗೆ ಎದುರಿನಿಂದ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಬಸ್ ಸಂಪೂರ್ಣವಾಗಿ ಬೆಂಕಿ ಹೊತ್ತಿಕೊಂಡು ಭಸ್ಮವಾಗಿದೆ. ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆಯೇ ಬಸ್‌ನ ಚಾಲಕ ಮತ್ತು ನಿರ್ವಾಹಕ ತಕ್ಷಣವೇ ಹೊರಗೆ ಜಿಗಿದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಲಾರಿ ಚಾಲಕ ಘಟನಾ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಬಸ್‌ನಲ್ಲಿ 14 ಮಹಿಳೆಯರು ಹಾಗೂ 15 ಪುರುಷರು ಇದ್ದರು. ಗಾಯಗೊಂಡ 21 ಮಂದಿಯನ್ನು ಹಿರಿಯೂರು ಮತ್ತು ತುಮಕೂರಿನ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಘಟನೆ ಕುರಿತು ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಅಪಘಾತದ ಕುರಿತು ಹೆಚ್ಚಿನ ಮಾಹಿತಿಗೆ: ಮತ್ತೊಂದು ಘನಘೋರ ದುರಂತ: ಚಿತ್ರದುರ್ಗ ಹೆದ್ದಾರಿಯಲ್ಲಿ ಹೊತ್ತಿ ಉರಿದ ಖಾಸಗಿ ಬಸ್​​​​, 9ಕ್ಕೂ ಹೆಚ್ಚು ಜನ ಸಜೀವ ದಹನ

ಚಿತ್ರದುರ್ಗ ಭೀಕರ ಬಸ್ ಅಪಘಾತ: ಮೃತಪಟ್ಟ ಪ್ರಯಾಣಿಕರಲ್ಲಿ ಗೋಕರ್ಣದವರೇ ಹೆಚ್ಚು

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Published on: Dec 25, 2025 07:40 AM