AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರು, ಆಟೋ ನಡುವೆ ಮುಖಾಮುಖಿ ಡಿಕ್ಕಿ: 10 ಮಂದಿಗೆ ಗಂಭೀರ ಗಾಯ

ಕಾರು, ಆಟೋ ನಡುವೆ ಮುಖಾಮುಖಿ ಡಿಕ್ಕಿ: 10 ಮಂದಿಗೆ ಗಂಭೀರ ಗಾಯ

ರಾಮ್​, ಮೈಸೂರು
| Edited By: |

Updated on: May 20, 2026 | 5:58 PM

Share

ಮೈಸೂರಿನ ಟಿ.ನರಸೀಪುರ ತಾಲ್ಲೂಕಿನ ಚೌಹಳ್ಳಿ ಬಳಿ ಕಾರು ಮತ್ತು ಆಟೋ ನಡುವೆ ಭೀಕರ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಆಟೋದಲ್ಲಿದ್ದ 10ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕಾರು ಡಿಕ್ಕಿಯಾದ ರಭಸಕ್ಕೆ ಆಟೋ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಟಿ.ನರಸೀಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮೈಸೂರು, ಮೇ 20: ಕಾರು ಮತ್ತು ಆಟೋ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ 10ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲೂಕಿನ ಚೌಹಳ್ಳಿ ಬಳಿ ನಡೆದಿದೆ. ಅಪಘಾತದಲ್ಲಿ ಆಟೋದಲ್ಲಿದ್ದ ಪ್ರಯಾಣಿಕರಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ಮೈಸೂರಿನ ಕೆ.ಆರ್​.ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕಾರು ಡಿಕ್ಕಿಯಾದ ರಭಸಕ್ಕೆ ಆಟೋ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಸ್ಥಳಕ್ಕೆ ಟಿ.ನರಸೀಪುರ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us