ನೆಲಮಂಗಲ ಬಳಿ ಬಸ್​​ಗೆ ಕಾರು ಗುದ್ದಿ ಐವರ ಸಾವು: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ

Updated on: Feb 15, 2026 | 8:41 AM

ನೆಲಮಂಗಲದ ಜಿಂದಾಲ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಇಂಡಿಕಾ ಕಾರು ಡಿವೈಡರ್ ಹಾರಿ ಕೆಎಸ್​ಆರ್​ಟಿಸಿ ಬಸ್‌ಗೆ ಡಿಕ್ಕಿ ಹೊಡೆದಿದೆ. ಈ ಘಟನೆಯಲ್ಲಿ ಕಾರಿನಲ್ಲಿದ್ದ ಐವರು ಮೃತಪಟ್ಟಿದ್ದಾರೆ. ಬಸ್ ಚಾಲಕ ಕೆಂಪರಾಜು ಅಪಘಾತದ ಭೀಕರತೆಯನ್ನು ವಿವರಿಸಿದ್ದಾರೆ. ಅಪಘಾತದ ತೀವ್ರತೆಗೆ ಬಸ್‌ನ ಗಾಜುಗಳು ಒಡೆದು ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದವರು ಹೇಳಿದ್ದಾರೆ.

ಬೆಂಗಳೂರು, ಫೆಬ್ರವರಿ 15: ನೆಲಮಂಗಲದ ಜಿಂದಾಲ್ ಬಳಿ ಸಂಭವಿಸಿದ ಬಸ್​​ ಮತ್ತು ಕಾರು ನಡುವಿನ ಅಪಘಾತದಲ್ಲಿ ಐವರು ಅಸುನೀಗಿರುವ ಘಟನೆಯ ಭೀಕರತೆಯನ್ನು ಕೆಎಸ್​ಆರ್​ಟಿಸಿ ಬಸ್ ಚಾಲಕ ಕೆಂಪರಾಜು ವಿವರಿಸಿದ್ದಾರೆ. ಕಾರು ಅತಿ ವೇಗದಲ್ಲಿ ಡಿವೈಡರ್ ಹಾರಿ ಬಸ್‌ಗೆ ಡಿಕ್ಕಿ ಹೊಡೆದಾಗ ಜೋರಾದ ಸದ್ದು ಕೇಳಿಸಿತು. ಅಪಘಾತದ ತೀವ್ರತೆಗೆ ಬಸ್‌ನ ಗಾಜುಗಳು ಒಡೆದು ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಬಸ್‌ನಲ್ಲಿ 43 ಪ್ರಯಾಣಿಕರಿದ್ದು, ಯಾರಿಗೂ ಯಾವುದೇ ಗಂಭೀರ ಗಾಯಗಳಾಗಿಲ್ಲ. ಅಪಘಾತವಾದ ಕಾರಿನಲ್ಲಿ ಐವರು ಇದ್ದರು. ಆ ಪೈಕಿ ಎಲ್ಲರೂ ಮೃತಪಟ್ಟಿದ್ದಾರೆ. ಬಸ್ ಅಪಘಾತಕ್ಕೀಡಾದ ನಂತರ, ಪ್ರಯಾಣಿಕರನ್ನು ಹುಬ್ಬಳ್ಳಿಗೆ ತೆರಳುತ್ತಿದ್ದ ಸಂಸ್ಥೆಯ ಬೇರೆ ಬಸ್‌ಗಳಲ್ಲಿ ಕಳುಹಿಸಲಾಗಿದೆ ಎಂದವರು ಮಾಹಿತಿ ನೀಡಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Loading...
Unable to load recommendations.
Follow Us
ಪ್ರಸನ್ನ ಹೆಗಡೆ

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More