ಬೆಂಗಳೂರು-ಚೆನ್ನೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಸರಣಿ ಅಪಘಾತ: ಮೂವರು ದುರ್ಮರಣ
ಭೀಕರ ಸರಣಿ ಅಪಘಾತದಲ್ಲಿ ಮೂವರು ದುರ್ಮರಣ ಹೊಂದಿರುವಂತಹ ಘಟನೆ ಬೆಂಗಳೂರು-ಚೆನ್ನೈ ರಾಷ್ಟ್ರೀಯ ಹೆದ್ದಾರಿಯ ಗಡಿಭಾಗ ತಮಿಳುನಾಡಿನ ಕುರುಬರಪಳ್ಳಿ ಬಳಿ ನಡೆದಿದೆ. 12ಕ್ಕೂ ಹೆಚ್ಚು ವಾಹನಗಳ ನಡುವೆ ಸರಣಿ ಅಪಘಾತ ಸಂಭವಿಸಿದೆ. ಗಾಯಗೊಂಡ ಏಳು ಜನರನ್ನು ಕೃಷ್ಣಗಿರಿ ಸರ್ಕಾರಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.
ಆನೇಕಲ್, ಜುಲೈ 20: ಬೆಂಗಳೂರು-ಚೆನ್ನೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಸರಣಿ ಅಪಘಾತ (serial accident) ಸಂಭವಿಸಿದೆ. ಕುರುಬರಪಳ್ಳಿ ಬಳಿ 12ಕ್ಕೂ ಹೆಚ್ಚು ವಾಹನಗಳು ಒಂದರ ಮೇಲೊಂದರಂತೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿದ್ದು, ಏಳು ಜನ ಗಂಭೀರವಾಗಿ ಗಾಯಗೊಂಡಿದ್ದಾರೆ. ರಸ್ತೆ ಕಾಮಗಾರಿಯಿಂದಾಗಿ ವಾಹನಗಳು ನಿಧಾನವಾಗಿ ಸಾಗುತ್ತಿದ್ದಾಗ ಲಾರಿಯ ನಿಯಂತ್ರಣ ತಪ್ಪಿ ಈ ಅಪಘಾತ ಸಂಭವಿಸಿದೆ. ಘಟನೆ ವೇಳೆ ಕಿಲೋಮೀಟರ್‌ಗಟ್ಟಲೆ ವಾಹನ ಸಂಚಾರ ಸ್ಥಗಿತವಾಗಿತ್ತು.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Jul 20, 2025 11:00 PM
