Video: ಕಾಲೇಜು ಬಳಿ ಮೂವರು ಯುವಕರಿಂದ ವಿದ್ಯಾರ್ಥಿನಿ ಮೇಲೆ ಆ್ಯಸಿಡ್ ದಾಳಿ

Updated on: Oct 27, 2025 | 7:13 AM

ದೆಹಲಿಯ ಕಾಲೇಜಿನ ಬಳಿ ಮೂವರು ಯುವಕರು 20 ವರ್ಷದ ವಿದ್ಯಾರ್ಥಿನಿ ಮೇಲೆ ಆ್ಯಸಿಡ್ ದಾಳಿ ನಡೆಸಿರುವ ಘಟನೆ ಜನರನ್ನು ಬೆಚ್ಚಿ ಬೀಳಿಸಿದೆ. ಹಾಡಹಗಲೇ ಈ ಘಟನೆ ನಡೆದಿದೆ. ಜಿತೇಂದರ್ ಎಂಬಾತ ತನ್ನ ಇನ್ನಿಬ್ಬರು ಸ್ನೇಹಿತರಾದ ಇಶಾನ್ ಮತ್ತು ಅರ್ಮಾನ್ ಜತೆ ಲಕ್ಷ್ಮೀಬಾಯಿ ಕಾಳೇಜಿನ ಬಳಿ ವಿದ್ಯಾರ್ಥಿನಿಯನ್ನು ಹಿಂಬಾಲಿಸಿ ಆಕೆಯ ಮೇಲೆ ಆ್ಯಸಿಡ್ ದಾಳಿ ನಡೆಸಿದ್ದಾರೆ. ಆಕೆ ಮುಖವನ್ನು ರಕ್ಷಿಸಿಕೊಳ್ಳಲು ಪ್ರಯತ್ನಿಸಿದ ಕಾರಣ ಕೈಗಳಿಗೆ ಗಂಭೀರ ಗಾಯಗಳಾಗಿವೆ. ದೆಹಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಘಟನೆಯ ತನಿಖೆ ಆರಂಭಿಸಿದ್ದಾರೆ.ಬೈಕ್​​ನಲ್ಲಿ ಬಂದು ಆ್ಯಸಿಡ್ ಎರಚಿ ಪರಾರಿಯಾದ ಮೂವರು ಆರೋಪಿಗಳನ್ನು ಬಂಧಿಸಲು ಹಲವು ತಂಡಗಳನ್ನು ರಚಿಸಿದ್ದಾರೆ.

ನವದೆಹಲಿ, ಅಕ್ಟೋಬರ್ 27: ದೆಹಲಿಯ ಕಾಲೇಜಿನ ಬಳಿ ಮೂವರು ಯುವಕರು 20 ವರ್ಷದ ವಿದ್ಯಾರ್ಥಿನಿ ಮೇಲೆ ಆ್ಯಸಿಡ್ ದಾಳಿ ನಡೆಸಿರುವ ಘಟನೆ ಜನರನ್ನು ಬೆಚ್ಚಿ ಬೀಳಿಸಿದೆ. ಹಾಡಹಗಲೇ ಈ ಘಟನೆ ನಡೆದಿದೆ. ಜಿತೇಂದರ್ ಎಂಬಾತ ತನ್ನ ಇನ್ನಿಬ್ಬರು ಸ್ನೇಹಿತರಾದ ಇಶಾನ್ ಮತ್ತು ಅರ್ಮಾನ್ ಜತೆ ಲಕ್ಷ್ಮೀಬಾಯಿ ಕಾಳೇಜಿನ ಬಳಿ ವಿದ್ಯಾರ್ಥಿನಿಯನ್ನು ಹಿಂಬಾಲಿಸಿ ಆಕೆಯ ಮೇಲೆ ಆ್ಯಸಿಡ್ ದಾಳಿ ನಡೆಸಿದ್ದಾರೆ. ಆಕೆ ಮುಖವನ್ನು ರಕ್ಷಿಸಿಕೊಳ್ಳಲು ಪ್ರಯತ್ನಿಸಿದ ಕಾರಣ ಕೈಗಳಿಗೆ ಗಂಭೀರ ಗಾಯಗಳಾಗಿವೆ. ದೆಹಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಘಟನೆಯ ತನಿಖೆ ಆರಂಭಿಸಿದ್ದಾರೆ.ಬೈಕ್​​ನಲ್ಲಿ ಬಂದು ಆ್ಯಸಿಡ್ ಎರಚಿ ಪರಾರಿಯಾದ ಮೂವರು ಆರೋಪಿಗಳನ್ನು ಬಂಧಿಸಲು ಹಲವು ತಂಡಗಳನ್ನು ರಚಿಸಿದ್ದಾರೆ.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ