Video: ಕುಡಿದ ಮತ್ತಿನಲ್ಲಿ ಟ್ರಕ್ ಚಾಲನೆ, ಹಲವು ವಾಹನಗಳಿಗೆ ಡಿಕ್ಕಿ, ಇಬ್ಬರು ಸಾವು, 11 ಮಂದಿಗೆ ಗಾಯ

ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ಟ್ರಕ್ ಚಲಾಯಿಸಿದ ಪರಿಣಾಮ ಹಲವು ವಾಹನಗಳ ಮೇಲೆ ಹರಿದು ಇಬ್ಬರು ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಘಟನೆಯಲ್ಲಿ 11 ಮಂದಿ ಗಾಯಗೊಂಡಿದ್ದಾರೆ. ವಿದ್ಯಾ ಪ್ಯಾಲೇಸ್‌ನಿಂದ ಬರುತ್ತಿದ್ದ ಟ್ರಕ್ ನಿಯಂತ್ರಣ ತಪ್ಪಿ ಸುಮಾರು 1.5 ಕಿ.ಮೀಗಳಷ್ಟು ದೂರ ಎದುರಿದ್ದ ಎಲ್ಲಾ ವಾಹನಗಳಿಗೆ ಡಿಕ್ಕಿ ಹೊಡೆಯುತ್ತಾ ಹೋಗಿದೆ. ಟ್ರಕ್ ಮೊದಲು ಬೈಕ್​​ಗೆ ಡಿಕ್ಕಿ ಹೊಡೆದಿದೆ.ನಂತರವೂ ಟ್ರಕ್ ಮುಂದೆ ಚಲಿಸುತ್ತಲೇ ಇತ್ತು. ಕಾರುಗಳು, ಇ-ರಿಕ್ಷಾಗಳು, ಆಟೋರಿಕ್ಷಾಗಳು ಮತ್ತು ಪಾದಚಾರಿಗಳಿಗೂ ಡಿಕ್ಕಿ ಹೊಡೆದಿದೆ.

ಇಂಧೋರ್, ಸೆಪ್ಟೆಂಬರ್ 16: ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ಟ್ರಕ್ ಚಲಾಯಿಸಿದ ಪರಿಣಾಮ ಹಲವು ವಾಹನಗಳ ಮೇಲೆ ಹರಿದು ಇಬ್ಬರು ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಘಟನೆಯಲ್ಲಿ 11 ಮಂದಿ ಗಾಯಗೊಂಡಿದ್ದಾರೆ. ವಿದ್ಯಾ ಪ್ಯಾಲೇಸ್‌ನಿಂದ ಬರುತ್ತಿದ್ದ ಟ್ರಕ್ ನಿಯಂತ್ರಣ ತಪ್ಪಿ ಸುಮಾರು 1.5 ಕಿ.ಮೀಗಳಷ್ಟು ದೂರ ಎದುರಿದ್ದ ಎಲ್ಲಾ ವಾಹನಗಳಿಗೆ ಡಿಕ್ಕಿ ಹೊಡೆಯುತ್ತಾ ಹೋಗಿದೆ. ಟ್ರಕ್ ಮೊದಲು ಬೈಕ್​​ಗೆ ಡಿಕ್ಕಿ ಹೊಡೆದಿದೆ.ನಂತರವೂ ಟ್ರಕ್ ಮುಂದೆ ಚಲಿಸುತ್ತಲೇ ಇತ್ತು. ಕಾರುಗಳು, ಇ-ರಿಕ್ಷಾಗಳು, ಆಟೋರಿಕ್ಷಾಗಳು ಮತ್ತು ಪಾದಚಾರಿಗಳಿಗೂ ಡಿಕ್ಕಿ ಹೊಡೆದಿದೆ. ಜನರು ಕಿರುಚುತ್ತಾ ಓಡುತ್ತಿದ್ದರು, ಆದರೆ ಅದನ್ನು ತಡೆಯಲು ಯಾರಿಂದಲೂ ಸಾಧ್ಯವಾಗಲಿಲ್ಲ. ನಜ್ಜುಗುಜ್ಜಾದ ಬೈಕಿಗೆ ಬೆಂಕಿ ಹೊತ್ತಿಕೊಂಡಿತು ಜ್ವಾಲೆಗಳು ಟ್ರಕ್‌ನ ಮುಂಭಾಗವನ್ನು ಆವರಿಸಿದ ಪರಿಣಾಮ ಮಧ್ಯೆ ಸಿಲುಕಿದ ಬೈಕ್ ಸವಾರ ಸಾವನ್ನಪ್ಪಿದ್ದಾರೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Loading...
Unable to load recommendations.
Follow Us