AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಕ್ಯಾಂಟರ್​ ಚಾಲಕ

ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಕ್ಯಾಂಟರ್​ ಚಾಲಕ

ನವೀನ್ ಕುಮಾರ್ ಟಿ
| Edited By: |

Updated on: Feb 13, 2026 | 2:57 PM

Share

ಹೊಸಕೋಟೆ-ದಾಬಸ್​ಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ 7 ಜನ ದುರ್ಮರಣ ಹೊಂದಿದ್ದು, ಕ್ಯಾಂಟರ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಯ ಕುರಿತು ಚಾಲಕ ಮಾತನಾಡಿ, ಕ್ಯಾಂಟರ್​​ಗೆ ಹಿಂದಿನಿಂದ ಬಂದ ವಾಹನ ಗುದ್ದಿ ಅಪಘಾತ ನಡೆದ ಬಗ್ಗೆ ಸಂಪೂರ್ಣ ವಿವರಣೆ ನೀಡಿದ್ದಾರೆ.

ದೇವನಹಳ್ಳಿ, ಫೆಬ್ರವರಿ 13: ಹೊಸಕೋಟೆ-ದಾಬಸ್​​ಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಭೀಕರ ಸರಣಿ ಅಪಘಾತದಲ್ಲಿ 7 ಜನ ದುರ್ಮರಣ ಹೊಂದಿದ್ದು, ಅಪಘಾತದಲ್ಲಿ ಬದುಕುಳಿದ ಕ್ಯಾಂಟರ್ ಚಾಲಕ ಘಟನೆಯ ಕುರಿತು ವಿವರಿಸಿದ್ದಾರೆ. ಮಾಲೂರು ಕಡೆಯಿಂದ ತುಮಕೂರಿಗೆ ತೆರಳುತ್ತಿದ್ದ ವೇಳೆ ಹಿಂದಿನಿಂದ ಬಂದ ವಾಹನ ಕ್ಯಾಂಟರ್​​ಗೆ ಗುದ್ದಿದೆ. ಇದರಿಂದ ಕ್ಯಾಂಟರ್ ಪಲ್ಟಿಯಾಗಿದ್ದು, ಸ್ಥಳೀಯರು ಸಹಾಯಕ್ಕೆ ಬಂದು ತನ್ನನ್ನು ಮೇಲೆತ್ತಿದ್ದಾರೆ. ಬಳಿಕ ಸ್ಥಳೀಯರ ಸಹಾಯದಿಂದ ಸ್ನೇಹಿತರಿಗೆ ಕರೆ ಮಾಡಿ, ಆಸ್ಪತ್ರೆಗೆ ದಾಖಲಾಗಿದ್ದೇನೆ ಎಂದು ತಿಳಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us
Naveen Kumar
Naveen Kumar

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More