Hoskote Biryani: ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!

Edited By:

Updated on: Aug 23, 2026 | 10:01 AM

ಹೊಸಕೋಟೆಯಲ್ಲಿ ಮುಂಜಾನೆ ಬಿರಿಯಾನಿ ಸೆಂಟರ್‌ಗಳ ಅಕಾಲಿಕ ಕಾರ್ಯಾಚರಣೆ, ಅಪಘಾತಗಳು, ಟ್ರಾಫಿಕ್ ಜಾಮ್ ಹಾಗೂ ಎಂಆರ್‌ಪಿ ಮೀರಿ ಮಾರಾಟದ ಹಿನ್ನೆಲೆಯಲ್ಲಿ ಪೊಲೀಸರು ಹೋಟೆಲ್ ಮಾಲೀಕರಿಗೆ ಎಚ್ಚರಿಕೆ ನೀಡಿದ್ದಾರೆ. ಇನ್ಸ್​ಪೆಕ್ಟರ್​ ಗೋವಿಂದ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ, ಬೆಳಗ್ಗೆ 6 ಗಂಟೆಯ ನಂತರ ಬಿರಿಯಾನಿ ಸೆಂಟರ್‌ಗಳನ್ನು ತೆರೆಯುವಂತೆ ಮತ್ತು ಇತರ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಲಾಗಿದೆ.

ಹೊಸಕೋಟೆ, ಆಗಸ್ಟ್ 23: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ ಮುಂಜಾನೆ 4 ಗಂಟೆಗೆ ತೆರೆಯುತ್ತಿದ್ದ ಬಿರಿಯಾನಿ ಸೆಂಟರ್‌ಗಳಿಗೆ ಪೊಲೀಸರು ಬ್ರೇಕ್ ಹಾಕಿದ್ದಾರೆ. ಅಕಾಲಿಕವಾಗಿ ಅಂಗಡಿಗಳನ್ನು ತೆರೆಯುವ ಮೂಲಕ ಸಂಚಾರ ಅಸ್ತವ್ಯಸ್ತತೆ, ಅಪಘಾತಗಳು ಹಾಗೂ ಇತರ ಅಕ್ರಮ ಚಟುವಟಿಕೆಗಳು ಹೆಚ್ಚಾಗುತ್ತಿದ್ದ ಕಾರಣ, ಪೊಲೀಸರು ಬಿರಿಯಾನಿ ಸೆಂಟರ್ ಮತ್ತು ಇತರ ಹೋಟೆಲ್ ಮಾಲೀಕರ ಸಭೆ ನಡೆಸಿ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ.

ಹೊಸಕೋಟೆ ಇನ್ಸ್​ಪೆಕ್ಟರ್​ ಗೋವಿಂದ್ ಅವರು ಮಾಲೀಕರೊಂದಿಗೆ ಮಾತನಾಡಿ, ಟೋಲ್ ಗೇಟ್ ಬಳಿಯ ಅಂಗಡಿಗಳನ್ನು ರಾತ್ರಿ 11 ಗಂಟೆಯ ನಂತರ ತೆರೆಯಬಾರದು ಮತ್ತು ಬಿರಿಯಾನಿ ಸೆಂಟರ್‌ಗಳನ್ನು ಬೆಳಗ್ಗೆ 6 ಗಂಟೆಯ ನಂತರವಷ್ಟೇ ತೆರೆಯಬೇಕು ಎಂದು ಸೂಚಿಸಿದ್ದಾರೆ. ಅಲ್ಲದೆ, ಯಾವುದೇ ಕಾರಣಕ್ಕೂ ಎಂಆರ್‌ಪಿ ಬೆಲೆಗಿಂತ ಹೆಚ್ಚು ಬೆಲೆಗೆ ವಸ್ತುಗಳನ್ನು ಮಾರಾಟ ಮಾಡಬಾರದು ಎಂದು ಎಚ್ಚರಿಸಿದ್ದಾರೆ. ಎಸ್‌ಟಿಆರ್ ರಸ್ತೆ, ಜಾಲರಹಳ್ಳಿ ಬಳಿ ಮುಂಜಾನೆಯ ಬಿರಿಯಾನಿಗಾಗಿ ಬರುವವರು ಅಪಘಾತಗಳಿಗೆ ಒಳಗಾಗುತ್ತಿರುವುದು, ಗಲಾಟೆಗಳು ಮತ್ತು ಕಳ್ಳತನ ಪ್ರಕರಣಗಳು ಹೆಚ್ಚಾಗುತ್ತಿರುವುದು ಪೊಲೀಸ್ ಇಲಾಖೆಯ ಗಮನಕ್ಕೆ ಬಂದಿದೆ. ಹೋಟೆಲ್ ಮಾಲೀಕರು ತಮ್ಮ ಆವರಣದಲ್ಲಿ ಮದ್ಯಪಾನ ನಿಷೇಧಿಸಬೇಕು ಮತ್ತು ಟ್ರಾಫಿಕ್ ಜಾಮ್ ಆಗದಂತೆ ನೋಡಿಕೊಳ್ಳಬೇಕು ಎಂದು ಪೊಲೀಸರು ಆದೇಶಿಸಿದ್ದಾರೆ. ನಿಯಮಗಳನ್ನು ಪಾಲಿಸದಿದ್ದರೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ನವೀನ್ ಕುಮಾರ್ ಟಿ.

ನವೀನ್ ಕುಮಾರ್ ಟಿ ರವರು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡದ ದೇವನಹಳ್ಳಿ, ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಎಂಎಸ್​ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ಇವರು ಪದವಿ ಶಿಕ್ಷಣ ಮುಗಿದ ನಂತರ ಟಿವಿ9 ಕನ್ನಡದಲ್ಲಿ ವರದಿಗಾರರಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದಾರೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಹುದ್ದೆಯನ್ನು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಿದ್ದಾರೆ.

Read More