ಹೊಸಪೇಟೆ: ಬೆಳ್ಳಂಬೆಳಗ್ಗೆ ಅಡುಗೆ ಸಿಲಿಂಡರ್ ಸ್ಫೋಟ; 8 ಜನರಿಗೆ ಗಾಯ
ಹೊಸಪೇಟೆ ತಾಲೂಕಿನ ಗಾದಿಗನೂರು ಗ್ರಾಮದಲ್ಲಿ ಬೆಳಗಿನ ಜಾವ ಅಡುಗೆ ಸಿಲಿಂಡರ್ ಸ್ಫೋಟಗೊಂಡಿದೆ. ಈ ದುರ್ಘಟನೆಯಲ್ಲಿ ಮನೆಯಲ್ಲಿದ್ದ 8 ಜನರಿಗೆ ಗಾಯಗಳಾಗಿದ್ದು, ಅದೃಷ್ಟವಶಾತ್ ಯಾವುದೇ ಸಾವು ಸಂಭವಿಸಿಲ್ಲ. ಸ್ಫೋಟದ ತೀವ್ರತೆಗೆ ಮನೆಯ ಗೋಡೆ ಸಂಪೂರ್ಣ ಕುಸಿದಿದೆ. ಗಾಯಾಳುಗಳನ್ನು ತೋರಣಗಲ್ಲು ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಡಿಯೋ ನೋಡಿ.
ವಿಜಯನಗರ, ಸೆಪ್ಟೆಂಬರ್ 27: ಜಿಲ್ಲೆಯ ಹೊಸಪೇಟೆ ತಾಲೂಕಿನ ಗಾದಿಗನೂರು ಗ್ರಾಮದಲ್ಲಿ ಅಡುಗೆ ಸಿಲಿಂಡರ್ ಸ್ಫೋಟಗೊಂಡು (Cylinder explosion) ಮನೆಯಲ್ಲಿದ್ದ 8 ಜನರಿಗೆ ಗಾಯಗಳಾಗಿರುವಂತಹ ಘಟನೆ ನಡೆದಿದೆ. ಅದೃಷ್ಟವಶಾತ್ ಯಾವುದೇ ಸಾವು ಸಂಭವಿಸಿಲ್ಲ. ಅಡುಗೆ ಸಿಲಿಂಡರ್ ಸ್ಫೋಟದ ತೀವ್ರತೆಗೆ ಮನೆಯ ಗೋಡೆ ಕುಸಿದೆ. ಸದ್ಯ ಗಾಯಾಳುಗಳಿಗೆ ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ತೋರಣಗಲ್ಲು ಸಂಜೀವಿನಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
