7 ಮಂದಿಯ ಬಲಿತೆಗದುಕೊಂಡ ಹೊಸಕೋಟೆ ಅಪಘಾತದ ಭೀಕರತೆ ಬಿಚ್ಚಿಟ್ಟ ಐಜಿ ಲಾಬುರಾಮ್
ಹೊಸಕೋಟೆ-ದಾಬಸ್ಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಮುಂಜಾನೆ ಭೀಕರ ಸರಣಿ ಅಪಘಾತ ಸಂಭವಿಸಿದೆ. ಸೂಲಿಬೆಲೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಈ ದುರ್ಘಟನೆಯಲ್ಲಿ ಏಳು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಕ್ಯಾಂಟರ್, ಬೈಕ್ ಮತ್ತು ಎಕ್ಸ್‌ಯುವಿ ಕಾರು ಒಳಗೊಂಡ ಈ ಅಪಘಾತದ ಕುರಿತು ಐಜಿ ಲಾಬುರಾಮ್ ಅವರು ಪ್ರಾಥಮಿಕ ಮಾಹಿತಿ ನೀಡಿದ್ದಾರೆ.
ದೇವನಹಳ್ಳಿ, ಫೆಬ್ರವರಿ 13: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ-ದಾಬಸ್ಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಮುಂಜಾನೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಏಳು ಮಂದಿ ದುರ್ಮರಣಕ್ಕೀಡಾಗಿದ್ದಾರೆ. ಹೊಸಕೋಟೆ ತಾಲೂಕಿನ ಎಂ.ಸತ್ಯವರ ಗ್ರಾಮದ ಸಮೀಪದ ಸೂಲಿಬೆಲೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದೆ. ಈ ಅಪಘಾತದ ತೀವ್ರತೆ ಕುರಿತು ಐಜಿ ಲಾಬುರಾಮ್ ಮಾಹಿತಿ ನೀಡಿದ್ದು, ಸ್ಥಳದಿಂದ ವಾಹನಗಳನ್ನು ತೆರವುಗೊಳಿಸಿ, ಮೃತದೇಹಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಮೃತರ ಪೈಕಿ ಮೂವರನ್ನು ಗುರುತಿಸಲಾಗಿದ್ದು, ಅವರ ಪೋಷಕರಿಗೆ ಮತ್ತು ಸಂಬಂಧಿಕರಿಗೆ ಮಾಹಿತಿ ನೀಡಲಾಗಿದೆ. ಗುರುತಿಸಲ್ಪಟ್ಟ ಮೂವರು ಬೆಂಗಳೂರಿನ ನಿವಾಸಿಗಳು. ಇನ್ನುಳಿದವರ ಗುರುತು ಪತ್ತೆ ಕಾರ್ಯ ಮುಂದುವರಿದಿದೆ. ಪ್ರಕರಣದ ಕುರಿತು ಮುಂದಿನ ತನಿಖೆ ಪ್ರಗತಿಯಲ್ಲಿದೆ ಎಂದು ತಿಳಿಸಿದ್ದಾರೆ.
Follow Us
Latest Videos
ಅಸಹ್ಯದಲ್ಲೇ ಅಸಹ್ಯ, ಅದಕ್ಕೆ ನಾಮಿನೇಟ್ ಮಾಡಿದೆ; ಕಿರಣ್ ನಾಮಿನೇಟ್
ರಾತ್ರಿಯಿಡೀ ಮಳೆ ಅಬ್ಬರ: ಮಲ್ಲೇಶ್ವರಂನಲ್ಲಿ ಮರಬಿದ್ದು 2 ಕಾರುಗಳು ಜಖಂ
ಇಂದು ಸಂಕಷ್ಟ ಚತುರ್ಥಿ; ಗಜಗೌರಿ ವ್ರತ ಮಾಡುವವರಿಗೆ ಮಹತ್ವದ ದಿನ
ವಿದ್ಯಾರ್ಥಿಗಳಿಗೆ ಟಂಟಂಗಳೇ ಆಸರೆ: ಸ್ವಲ್ಪ ಯಾಮಾರಿದ್ರೂ ಪ್ರಾಣಕ್ಕೇ ಕುತ್ತು

