7 ಮಂದಿಯ ಬಲಿತೆಗದುಕೊಂಡ ಹೊಸಕೋಟೆ ಅಪಘಾತದ ಭೀಕರತೆ ಬಿಚ್ಚಿಟ್ಟ ಐಜಿ ಲಾಬುರಾಮ್

Edited By:

Updated on: Feb 13, 2026 | 10:58 AM

ಹೊಸಕೋಟೆ-ದಾಬಸ್​​ಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಮುಂಜಾನೆ ಭೀಕರ ಸರಣಿ ಅಪಘಾತ ಸಂಭವಿಸಿದೆ. ಸೂಲಿಬೆಲೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಈ ದುರ್ಘಟನೆಯಲ್ಲಿ ಏಳು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಕ್ಯಾಂಟರ್, ಬೈಕ್ ಮತ್ತು ಎಕ್ಸ್‌ಯುವಿ ಕಾರು ಒಳಗೊಂಡ ಈ ಅಪಘಾತದ ಕುರಿತು ಐಜಿ ಲಾಬುರಾಮ್ ಅವರು ಪ್ರಾಥಮಿಕ ಮಾಹಿತಿ ನೀಡಿದ್ದಾರೆ.

ದೇವನಹಳ್ಳಿ, ಫೆಬ್ರವರಿ 13: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ-ದಾಬಸ್​​ಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಮುಂಜಾನೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಏಳು ಮಂದಿ ದುರ್ಮರಣಕ್ಕೀಡಾಗಿದ್ದಾರೆ. ಹೊಸಕೋಟೆ ತಾಲೂಕಿನ ಎಂ.ಸತ್ಯವರ ಗ್ರಾಮದ ಸಮೀಪದ ಸೂಲಿಬೆಲೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದೆ. ಈ ಅಪಘಾತದ ತೀವ್ರತೆ ಕುರಿತು ಐಜಿ ಲಾಬುರಾಮ್ ಮಾಹಿತಿ ನೀಡಿದ್ದು, ಸ್ಥಳದಿಂದ ವಾಹನಗಳನ್ನು ತೆರವುಗೊಳಿಸಿ, ಮೃತದೇಹಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಮೃತರ ಪೈಕಿ ಮೂವರನ್ನು ಗುರುತಿಸಲಾಗಿದ್ದು, ಅವರ ಪೋಷಕರಿಗೆ ಮತ್ತು ಸಂಬಂಧಿಕರಿಗೆ ಮಾಹಿತಿ ನೀಡಲಾಗಿದೆ. ಗುರುತಿಸಲ್ಪಟ್ಟ ಮೂವರು ಬೆಂಗಳೂರಿನ ನಿವಾಸಿಗಳು. ಇನ್ನುಳಿದವರ ಗುರುತು ಪತ್ತೆ ಕಾರ್ಯ ಮುಂದುವರಿದಿದೆ. ಪ್ರಕರಣದ ಕುರಿತು ಮುಂದಿನ ತನಿಖೆ ಪ್ರಗತಿಯಲ್ಲಿದೆ ಎಂದು ತಿಳಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ನವೀನ್ ಕುಮಾರ್ ಟಿ.

ನವೀನ್ ಕುಮಾರ್ ಟಿ ರವರು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡದ ದೇವನಹಳ್ಳಿ, ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಎಂಎಸ್​ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ಇವರು ಪದವಿ ಶಿಕ್ಷಣ ಮುಗಿದ ನಂತರ ಟಿವಿ9 ಕನ್ನಡದಲ್ಲಿ ವರದಿಗಾರರಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದಾರೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಹುದ್ದೆಯನ್ನು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಿದ್ದಾರೆ.

Read More