ಟ್ರಕ್​ಗೆ ಡಿಕ್ಕಿಯಾಗಿ KSRTC ಬಸ್ ಮುಂಭಾಗ ನುಜ್ಜುಗುಜ್ಜು: ತಪ್ಪಿದ ಭಾರೀ ಅನಾಹುತ

Edited By:

Updated on: Jun 08, 2026 | 11:36 AM

ಕೋಲಾರ-ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಅತ್ತಿವಟ್ಟ ಬಳಿ ಟ್ರಕ್ ಚಾಲಕ ಏಕಾಏಕಿ ಯೂಟರ್ನ್ ಪಡೆದಿದ್ದರಿಂದ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ಮುಂಭಾಗ ಜಖಂಗೊಂಡಿದೆ. ಬಸ್ಸಿನಲ್ಲಿದ್ದ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅದೃಷ್ಟವಶಾತ್, ದೊಡ್ಡ ಅನಾಹುತವೊಂದು ಕೂದಲೆಳೆ ಅಂತರದಲ್ಲಿ ಪಾರಾಗಿದೆ. ಘಟನಾ ಸ್ಥಳದ ವಿಡಿಯೋ ಇಲ್ಲಿದೆ.

ದೇವನಹಳ್ಳಿ, ಜೂನ್ 8: ಕೋಲಾರ-ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಅತ್ತಿವಟ್ಟ ಗೇಟ್ ಬಳಿ ರಸ್ತೆ ಅಪಘಾತ ಸಂಭವಿಸಿದ್ದು, ಅದೃಷ್ಟವಶಾತ್ ಭಾರಿ ಪ್ರಮಾಣದ ಅನಾಹುತವೊಂದು ತಪ್ಪಿದೆ. ಹೆದ್ದಾರಿಯಲ್ಲಿ ಸಾಗುತ್ತಿದ್ದ ಟ್ರಕ್ ಚಾಲಕನ ಬೇಜವಾಬ್ದಾರಿತನದಿಂದಾಗಿ ಈ ಅಪಘಾತ ಸಂಭವಿಸಿದೆ. ಕೋಲಾರ ಕಡೆಯಿಂದ ಬೆಂಗಳೂರು ಕಡೆಗೆ ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಕೆಎಸ್‌ಆರ್‌ಟಿಸಿ (KSRTC) ಬಸ್ ಅತ್ತಿವಟ್ಟ ಗೇಟ್ ಬಳಿ ಬರುತ್ತಿದ್ದಂತೆಯೇ, ಹೆದ್ದಾರಿಯ ಎಡಬದಿಯಲ್ಲಿ ಚಲಿಸುತ್ತಿದ್ದ ಟ್ರಕ್ ಚಾಲಕನೊಬ್ಬ ಯಾವುದೇ ಮುನ್ಸೂಚನೆ ನೀಡದೆ ಏಕಾಏಕಿ ಬಲಬದಿಗೆ ಯೂಟರ್ನ್ (U-Turn) ತೆಗೆದುಕೊಳ್ಳಲು ಮುಂದಾಗಿದ್ದಾನೆ. ಟ್ರಕ್‌ನ ಈ ದಿಢೀರ್ ನಡೆಯಿಂದಾಗಿ ನಿಯಂತ್ರಣ ಕಳೆದುಕೊಂಡ ಕೆಎಸ್‌ಆರ್‌ಟಿಸಿ ಬಸ್ ನೇರವಾಗಿ ಟ್ರಕ್‌ಗೆ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ರಭಸಕ್ಕೆ ಸಾರಿಗೆ ಬಸ್ಸಿನ ಮುಂಭಾಗ ಸಂಪೂರ್ಣವಾಗಿ ಜಖಂಗೊಂಡಿದೆ. ಅಪಘಾತದ ವೇಳೆ ಬಸ್ಸಿನಲ್ಲಿದ್ದ ಪ್ರಯಾಣಿಕರು ತೀವ್ರ ಆತಂಕಕ್ಕೊಳಗಾದರು. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಬಸ್ಸಿನಲ್ಲಿದ್ದ ಕೆಲ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ತಕ್ಷಣವೇ ಅವರನ್ನು ಹೊಸಕೋಟೆಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಹೊಸಕೋಟೆ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ನವೀನ್ ಕುಮಾರ್ ಟಿ.

ನವೀನ್ ಕುಮಾರ್ ಟಿ ರವರು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡದ ದೇವನಹಳ್ಳಿ, ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಎಂಎಸ್​ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ಇವರು ಪದವಿ ಶಿಕ್ಷಣ ಮುಗಿದ ನಂತರ ಟಿವಿ9 ಕನ್ನಡದಲ್ಲಿ ವರದಿಗಾರರಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದಾರೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಹುದ್ದೆಯನ್ನು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಿದ್ದಾರೆ.

Read More