ಹೊಸಕೋಟೆ ಪೊಲೀಸರ ಭರ್ಜರಿ ಬೇಟೆ: 50 ಬೈಕ್ ಸಮೇತ ಇಬ್ಬರು ಅಂತರರಾಜ್ಯ ಕಳ್ಳರ ಬಂಧನ

Edited By:

Updated on: May 06, 2026 | 12:48 PM

ಹೊಸಕೋಟೆ ಪೊಲೀಸರು ಇಬ್ಬರು ಅಂತರರಾಜ್ಯ ಬೈಕ್ ಕಳ್ಳರನ್ನು ಬಂಧಿಸಿ, ಅವರಿಂದ 550 ಬೈಕ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಮೋಜು ಮಸ್ತಿಗಾಗಿ ಬೈಕ್ ಕಳವು ಮಾಡುತ್ತಿದ್ದ ಈ ಖದೀಮರು ಆಂಧ್ರ ಗಡಿಯಲ್ಲಿ ಅಗ್ಗದ ದರಕ್ಕೆ ಅವುಗಳನ್ನು ಮಾರಾಟ ಮಾಡುತ್ತಿದ್ದರು. ಖದೀಮರು ಮುಖ್ಯವಾಗಿ ರಾಯಲ್ ಎನ್‌ಫೀಲ್ಡ್ ಬುಲೆಟ್‌ಗಳು ಸೇರಿದಂತೆ ಇತರೆ ಹೊಸ ಮಾದರಿಯ ವಾಹನಗಳನ್ನೇ ಗುರಿಯಾಗಿಸಿದ್ದರು.

ಹೊಸಕೋಟೆ, ಮೇ 6: ಸಾರ್ವಜನಿಕರ ದ್ವಿಚಕ್ರ ವಾಹನಗಳನ್ನು ಕದ್ದು ಪರಾರಿಯಾಗುತ್ತಿದ್ದ ಇಬ್ಬರು ಅಂತರರಾಜ್ಯ ಬೈಕ್ ಕಳ್ಳರನ್ನು ಹೊಸಕೋಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ನರಸಿಂಹಮೂರ್ತಿ ಮತ್ತು ಪ್ರಸಾದ್ ಎಂದು ಗುರುತಿಸಲಾಗಿದ್ದು, ಅವರಿಂದ ಬರೋಬ್ಬರಿ 55 ಲಕ್ಷ ರೂಪಾಯಿ ಮೌಲ್ಯದ 50 ವಿವಿಧ ಕಂಪನಿಯ ಬೈಕ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಖದೀಮರು ತಮ್ಮ ಮೋಜು ಮಸ್ತಿಗಾಗಿ ಬೈಕ್‌ಗಳನ್ನು ಕದ್ದು ಆಂಧ್ರದ ಗಡಿ ಭಾಗಗಳಲ್ಲಿ ಕೇವಲ ಐದರಿಂದ ಹತ್ತು ಸಾವಿರ ರೂಪಾಯಿಗಳಿಗೆ ಮಾರಾಟ ಮಾಡಿ ಮಜಾ ಮಾಡುತ್ತಿದ್ದರು. ಹೊಸಕೋಟೆಯಲ್ಲಿ ಪಾನಿಪುರಿ ವ್ಯಾಪಾರಿಯೊಬ್ಬರ ಬೈಕ್ ಕಳವು ಮಾಡಿದ ಪ್ರಕರಣದ ಬೆನ್ನುಹತ್ತಿದ ಪೊಲೀಸರಿಗೆ ಈ ದೊಡ್ಡ ಜಾಲ ಪತ್ತೆಯಾಗಿದೆ. ಇತ್ತೀಚೆಗೆ ಬೈಕ್ ಕಳ್ಳತನ ಪ್ರಕರಣಗಳು ಹೆಚ್ಚಾದ ಹಿನ್ನೆಲೆಯಲ್ಲಿ ಪೊಲೀಸರು ವಿಶೇಷ ಕಾರ್ಯಾಚರಣೆ ಕೈಗೊಂಡಿದ್ದರು.

ಬಂಧಿತರು ಕೇವಲ ಹೊಸಕೋಟೆ ಮಾತ್ರವಲ್ಲದೆ ಕೋಲಾರ, ಮಾಲೂರು, ಬಂಗಾರಪೇಟೆ, ಕೆ.ಆರ್. ಪುರ ಮತ್ತು ಕಾಡುಗೋಡಿ ಭಾಗಗಳಲ್ಲಿಯೂ ತಮ್ಮ ಕೈಚಳಕ ತೋರಿಸುತ್ತಿದ್ದರು. ಪ್ರಸ್ತುತ ಆರೋಪಿಗಳ ವಿರುದ್ಧ ವಿವಿಧ ಠಾಣೆಗಳಲ್ಲಿ 20ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದು, ಹೊಸಕೋಟೆ ಪೊಲೀಸರು ಇಬ್ಬರನ್ನೂ ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ನವೀನ್ ಕುಮಾರ್ ಟಿ.

ನವೀನ್ ಕುಮಾರ್ ಟಿ ರವರು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡದ ದೇವನಹಳ್ಳಿ, ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಎಂಎಸ್​ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ಇವರು ಪದವಿ ಶಿಕ್ಷಣ ಮುಗಿದ ನಂತರ ಟಿವಿ9 ಕನ್ನಡದಲ್ಲಿ ವರದಿಗಾರರಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದಾರೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಹುದ್ದೆಯನ್ನು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಿದ್ದಾರೆ.

Read More