ಹಿರಿಯ ನಟ ರಾಜೇಶ್ ದೇಹದಲ್ಲಿ ಇನ್ಫೆಕ್ಷನ್ ಆಗಿದೆ; ಮಾಹಿತಿ ಹಂಚಿಕೊಂಡ ವೈದ್ಯರು
ಸ್ಯಾಂಡಲ್ವುಡ್ನ ಹಿರಿಯ ನಟ ರಾಜೇಶ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ. ಅವರ ಆರೋಗ್ಯದ ಬಗ್ಗೆ ಆಸ್ಪತ್ರೆಯ ವೈದ್ಯರು ಮಾಹಿತಿ ಹಂಚಿಕೊಂಡಿದ್ದಾರೆ. ‘
ಸ್ಯಾಂಡಲ್ವುಡ್ನ ಹಿರಿಯ ನಟ ರಾಜೇಶ್ (Actor Rajesh) ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ. ಅವರ ಆರೋಗ್ಯದ ಬಗ್ಗೆ ಆಸ್ಪತ್ರೆಯ ವೈದ್ಯರು ಮಾಹಿತಿ ಹಂಚಿಕೊಂಡಿದ್ದಾರೆ. ‘ಫೆಬ್ರವರಿ 9ರಂದು ರಾಜೇಶ್ ಆಸ್ಪತ್ರೆಗೆ ದಾಖಲಾಗಿದ್ದರು. ರಾಜೇಶ್ ಅವರಿಗೆ ಉಸಿರಾಟದ ಸಮಸ್ಯೆ ಇದೆ. ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ದೇಹದಲ್ಲಿ ಇನ್ಫೆಕ್ಷನ್ ಆಗಿದೆ. ಅವರ ಪರಿಸ್ಥಿತಿ ಹೇಗಿದೆ ಎಂಬುದನ್ನು ನೋಡಿಕೊಂಡು ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ. ನಾವು ಕುಟುಂಬದ ಜತೆಗೂ ಸಂಪರ್ಕದಲ್ಲಿದ್ದೇವೆ’ ಎಂದು ಡಾ. ಗಂಗಾಧರ್ ಮಾಹಿತಿ ನೀಡಿದ್ದಾರೆ. ರಾಜೇಶ್ ಜನಿಸಿದ್ದು ಬೆಂಗಳೂರಿನಲ್ಲಿ. ಅವರ ಮೂಲ ಹೆಸರು ಮುನಿ ಚೌಡಪ್ಪ. ಬಳಿಕ ಅವರು ನಾಟಕಗಳಲ್ಲಿ ಅಭಿನಯಿಸುವಾಗ ವಿದ್ಯಾಸಾಗರ್ ಎಂಬ ಹೆಸರಿನಿಂದ ಗುರುತಿಸಿಕೊಂಡಿದ್ದರು. ಚಿತ್ರರಂಗದಲ್ಲಿ ‘ತಲಾತಪಸ್ವಿ’ ರಾಜೇಶ್ ಎಂದೇ ಅವರು ಫೇಮಸ್ ಆದರು. 1960ರ ದಶಕದಲ್ಲಿ ಅವರು ಚಿತ್ರರಂಗಕ್ಕೆ ಕಾಲಿಟ್ಟರು. ನೂರಾರು ಸಿನಿಮಾಗಳಲ್ಲಿ ನಟಿಸಿ ಜನಮನ ಗೆದ್ದರು.
ಇದನ್ನೂ ಓದಿ: ‘ಕಲ್ಪನಾ ಮತ್ತು ಮಂಜುಳಾಗೆ ಇಂಥ ಸಾವು ಬೇಕಿತ್ತಾ?’; ಮಿಂಚಿ ಮರೆಯಾದ ನಟಿಯರ ಬಗ್ಗೆ ರಾಜೇಶ್ ವಿಷಾದದ ಮಾತು
‘ಕಪಾಳಕ್ಕೆ ಹೊಡೆಯೋದ್ರಲ್ಲಿ ಪುಟ್ಟಣ್ಣ ಕಣಗಾಲ್ ನಂ.1’; ನಟ ರಾಜೇಶ್ ಹೇಳಿದ ಅಚ್ಚರಿಯ ಸಂಗತಿ