ಬೆಂಗಳೂರು ವಿವಿ ಹಾಸ್ಟೆಲ್ನಲ್ಲೂ ವಿದ್ಯಾರ್ಥಿಗಳಿಗೆ ಕಳಪೆ ಗುಣಮಟ್ಟದ ಊಟ, ವಾರ್ಡನ್ ವಿರುದ್ಧ ಪ್ರತಿಭಟನೆ!
ಸರ್ಕಾರ ಮತ್ತು ಸಂಬಂಧಪಟ್ಟ ಇಲಾಖೆಯ ಮಂತ್ರಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯ, ಮೌನ ಅರ್ಥವಾಗಲ್ಲ ಮಾರಾಯ್ರೇ. ಇಲ್ಲಿರುವ ವಿದ್ಯಾರ್ಥಿಗಳು ಓದಲು ಬಂದಿರುವವರು, ಅವರಿಗೆ ಸಮಯಕ್ಕೆ ಸರಿಯಾಗಿ, ಉತ್ತಮ ಗುಣಮಟ್ಟದ ಆಹಾರ ನೀಡದಿದ್ದರೆ ಓದಿನ ಮೇಲೆ ಗಮನ ಕೇಂದ್ರೀಕರಿಸುವುದು ಹೇಗೆ ಸಾಧ್ಯವಾದೀತು? ಸರ್ಕಾರ ಕೂಡಲೇ ಎಚ್ಚೆತ್ತುಕೊಳ್ಳದಿದ್ದರೆ ವಿದ್ಯಾರ್ಥಿಗಳ ಆಕ್ರೋಶ ಹೆಚ್ಚುವುದು ನಿಶ್ಚಿತ.
ಬೆಂಗಳೂರು: ಅತ್ತ ಮೈಸೂರಲ್ಲಿ ಜಯಚಾಮರಾಜೇಂದ್ರ ಇಂಜಿನೀಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ತಮ್ಮ ಹಾಸ್ಟೆಲ್ ನಲ್ಲಿ ಹುಳು ಬಿದ್ದ ಆಹಾರ ನೀಡಲಾಗುತ್ತಿದೆ ಎಂದು ಕಳೆದ ರಾತ್ರಿ ಬೀದಿಗಿಳಿದು ಪ್ರತಿಭಟನೆ ನಡೆಸಿದರೆ ಇತ್ತ ಬೆಂಗಳೂರು ವಿಶ್ವವಿದ್ಯಾಲಯ (Bangalore University) ಜ್ಞಾನಭಾರತಿ ಹಾಸ್ಟೆಲ್ ವಿದ್ಯಾರ್ಥಿಗಳು ಕಳಪೆ ಗುಣಮಟ್ಟದ ಆಹಾರ (subnormal food) ನೀಡುತ್ತಿರುವುದರ ವಿರುದ್ಧ ಹಾಸ್ಟೆಲ್ ಆವರಣದಲ್ಲೇ (hostel premises) ಪ್ರತಿಭಟನೆ ನಡೆಸಿದರು. ಹಾಸ್ಟೆಲ್ ನಲ್ಲಿ ಊಟದ ವ್ಯವಸ್ಥೆ ಬಹಳ ಕೆಟ್ಟದ್ದಾಗಿದೆ, ಶುಚಿ ಮತ್ತು ರುಚಿಯಾದ ಊಟ ನೀಡುತ್ತಿಲ್ಲವೆಂದು ಬಹಳ ದಿನಗಳಿಂದ ದೂರುತ್ತಿದ್ದರೂ ವಾರ್ಡನ್ ಕಿವಿಗೆ ಹಾಕಿಕೊಳ್ಳುತ್ತಿಲ್ಲ ಎಂದು ಸಿಟ್ಟಿಗೆದ್ದ ವಿದ್ಯಾರ್ಥಿಗಳು ವಾರ್ಡನ್ ವಿರುದ್ಧ ಘೋಷಣೆ ಕೂಗಿದರು. ವಾರ್ಡನ್ ವಿದ್ಯಾರ್ಥಿಗಳ ಮುಂದೆ ನಿಂತಿರುವುದನ್ನು ವಿಡಿಯೋದಲ್ಲಿ ನೋಡಬಹುದು. ಸರ್ಕಾರ ಮತ್ತು ಸಂಬಂಧಪಟ್ಟ ಇಲಾಖೆಯ ಮಂತ್ರಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯ, ಮೌನ ಅರ್ಥವಾಗಲ್ಲ ಮಾರಾಯ್ರೇ. ಇಲ್ಲಿರುವ ವಿದ್ಯಾರ್ಥಿಗಳು ಓದಲು ಬಂದಿರುವವರು, ಅವರಿಗೆ ಸಮಯಕ್ಕೆ ಸರಿಯಾಗಿ, ಉತ್ತಮ ಗುಣಮಟ್ಟದ ಆಹಾರ ನೀಡದಿದ್ದರೆ ಓದಿನ ಮೇಲೆ ಗಮನ ಕೇಂದ್ರೀಕರಿಸುವುದು ಹೇಗೆ ಸಾಧ್ಯವಾದೀತು? ಸರ್ಕಾರ ಕೂಡಲೇ ಎಚ್ಚೆತ್ತುಕೊಳ್ಳದಿದ್ದರೆ ವಿದ್ಯಾರ್ಥಿಗಳ ಆಕ್ರೋಶ ಹೆಚ್ಚುವುದು ನಿಶ್ಚಿತ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ