Video: ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ, ರೈತ ಬೆಳೆಗೆ ಹಾನಿ
ಹೊಸೂರಿನ ಶಾನಮಾವು ಬಳಿ ಸುಮಾರು 40ಕ್ಕೂ ಹೆಚ್ಚು ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಕಾಡಂಚಿನ ಗ್ರಾಮಗಳಲ್ಲಿ ಭತ್ತ, ರಾಗಿ ಸೇರಿದಂತೆ ಹಲವು ಬೆಳೆಗಳನ್ನು ನಾಶಪಡಿಸಿವೆ. ಅರಣ್ಯ ಇಲಾಖೆಯು ಪಟಾಕಿ ಸಿಡಿಸಿ ಆನೆಗಳನ್ನು ಡೆಂಕಣಿಕೋಟೆ ಅರಣ್ಯಕ್ಕೆ ಓಡಿಸುವ ಕಾರ್ಯಾಚರಣೆ ನಡೆಸಿದೆ. ಈ ಆನೆ ಹಾವಳಿಯಿಂದ ರೈತರಿಗೆ ಅಪಾರ ನಷ್ಟ ಉಂಟಾಗಿದೆ.
ಹೊಸೂರು, ಡಿ,5: ರಾಜ್ಯದ ಗಡಿಭಾಗ ತಮಿಳುನಾಡಿನ ಹೊಸೂರು ಸಮೀಪದ ಶಾನಮಾವು ಎಂಬಲ್ಲಿ ಕಾಡಾನೆಗಳ ಹಿಂಡು ಹೋಗುವ ದೃಶ್ಯ ಡ್ರೋನ್ ಕ್ಯಾಮರಾದಲ್ಲಿ ಸೆರೆಯಾಗಿದೆ. ಸುಮಾರು 40ಕ್ಕೂ ಹೆಚ್ಚು ಕಾಡಾನೆಗಳು ಡ್ರೋನ್ ಕ್ಯಾಮರಾದಲ್ಲಿ ಸೆರೆಯಾಗಿದೆ. ಕಾಡಿನ ಸಮೀಪ ಇರುವ ಗ್ರಾಮಗಳಿಗೆ ನುಗ್ಗಿ ಬೆಳೆಗಳನ್ನು ಹಾನಿ ಮಾಡಿದೆ. ರೈತರು ಬೆಳೆದಿದ್ದ ರಾಗಿ, ಭತ್ತ, ಟೊಮೆಟೊ, ಬೀನ್ಸ್, ಎಲೆಕೋಸು ಸೇರಿದಂತೆ ಹಲವು ಬೆಳೆಗಳಿಗೆ ಹಾನಿ ಮಾಡಿದೆ. ಇದೀಗ ಆನೆಗಳನ್ನು ಓಡಿಸಲು ಅರಣ್ಯ ಇಲಾಖೆ ಕಾರ್ಯಾಚರಣೆ ನಡೆಸಿದೆ. ಪಟಾಕಿ ಸಿಡಿಸಿ ಕಾಡಾನೆಗಳನ್ನು ಡೆಂಕಣಿಕೋಟೆ ಅರಣ್ಯಕ್ಕೆ ಓಡಿಸಿದ್ದಾರೆ. ಈ ಬಗ್ಗೆ ಒಂದು ವಿಡಿಯೋ ಇಲ್ಲಿದೆ ನೋಡಿ.
ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ