ಚಿಕ್ಕಮಗಳೂರಿನಲ್ಲಿ ನಿನ್ನೆ ಸುರಿದ ಧಾರಾಕಾರ ಮಳೆಗೆ ಮನೆ ಕುಸಿತ: ಮಹಿಳೆ ಜಸ್ಟ್​ ಮಿಸ್​​!

ಚಿಕ್ಕಮಗಳೂರಿನಲ್ಲಿ ನಿನ್ನೆ ಸುರಿದ ಧಾರಾಕಾರ ಮಳೆಗೆ ಮನೆ ಕುಸಿತ: ಮಹಿಳೆ ಜಸ್ಟ್​ ಮಿಸ್​​!

ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Updated By: ಗಂಗಾಧರ​ ಬ. ಸಾಬೋಜಿ

Updated on: Jul 13, 2024 | 4:50 PM

ಕಳೆದ ಮೂರು ದಿನದಿಂದ ಚಿಕ್ಕಮಗಳೂರು ಜಿಲ್ಲೆಯಾದ್ಯಂತ ತುಂತುರು ಮಳೆ ಸುರಿಯುತ್ತಿದೆ. ಇಂದು ಕೂಡ ಧಾರಾಕಾರ ಮಳೆ ಆಗಿದ್ದು, ಪರಿಣಾಮ ಏಕಾಏಕಿ ಮನೆಯ ಮೇಲ್ಛಾವಣಿ, ಗೋಡೆ ಕುಸಿದು ಬಿದ್ದಿರುವಂತಹ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಕ್ಕಿ ಗ್ರಾಮದಲ್ಲಿ ನಡೆದಿದೆ. ಅದೃಷ್ಟವಶಾತ್​​ ಮನೆಯಲ್ಲಿದ್ದ ಮಹಿಳೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಚಿಕ್ಕಮಗಳೂರು, ಜುಲೈ 13: ಕಳೆದ ಮೂರು ದಿನದಿಂದ ಚಿಕ್ಕಮಗಳೂರು ಜಿಲ್ಲೆಯಾದ್ಯಂತ ತುಂತುರು ಮಳೆ (rain) ಸುರಿಯುತ್ತಿದೆ. ಮಳೆಯಿಂದಾಗಿ ಜಿಲ್ಲೆಯಲ್ಲಿ ಕೆಲ ಅವಾಂತರಗಳು ಸಂಭವಿಸಿವೆ. ನಿನ್ನೆ ರಾತ್ರಿ ಸುರಿದ ಧಾರಾಕಾರ ಮಳೆಗೆ ಮನೆ ಕುಸಿದಿರುವಂತಹ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಕ್ಕಿ ಗ್ರಾಮದಲ್ಲಿ ನಡೆದಿದೆ. ನಿನ್ನೆ ರಾತ್ರಿ ಜೋರು ಮಳೆ ಆಗಿದ್ದು, ಏಕಾಏಕಿ ಮನೆಯ ಮೇಲ್ಛಾವಣಿ, ಗೋಡೆ ಕುಸಿದಿದೆ. ಅದೃಷ್ಟವಶಾತ್​ ಮನೆಯಲ್ಲಿದ ಮಹಿಳೆ ಸರಿತಾ ಎಂಬುವವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮನೆಯಲ್ಲಿದ್ದ ಗೃಹೋಪಯೋಗಿ ವಸ್ತುಗಳಿಗೆ ಹಾಳಾಗಿದ್ದು, ಮನೆ ಕಳೆದು ಕೊಂಡು ಮಹಿಳೆ ಕಂಗಾಲಾಗಿದ್ದಾರೆ. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.