ಹೊಸ ಸಿಲಿಂಡರ್ ಜೋಡಣೆ ವೇಳೆ ಅವಘಡ: ಭೀಕರ ಸ್ಫೋಟಕ್ಕೆ ಮನೆಗೆ ಮನೆಯೇ ಸರ್ವನಾಶ!
ಬಳ್ಳಾರಿ ಜಿಲ್ಲೆ ಸಂಡೂರ ತಾಲೂಕಿನ ತಾಳೂರು ಗ್ರಾಮದ ಸುಬಾನಿ ಸಾಬ್ ಎನ್ನುವವರ ಮನೆಯಲ್ಲಿ ಹೊಸ ಸಿಲಿಂಡರ್ ಜೋಡಣೆ ವೇಳೆ ಗ್ಯಾಸ್ ಸೋರಿಕೆಯಾಗಿ ಅವಘಡ ನಡೆದಿದೆ. ಅಡುಗೆ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಮನೆಗೆ ಮನೆಯೇ ಛಿದ್ರ ಛಿದ್ರವಾಗಿದ್ದು, ಪಕ್ಕದ ಮನೆಯ ಗೋಡೆಯೂ ಕುಸಿದು ಬಿದ್ದಿದೆ. ಘಟನೆಯಲ್ಲಿ ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಬಳ್ಳಾರಿ, ಮಾರ್ಚ್ 02: ಅಡುಗೆ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಮನೆಗೆ ಮನೆಯೇ ಸರ್ವನಾಶವಾಗಿರುವ ಆಘಾತಕಾರಿ ಘಟನೆ ಬಳ್ಳಾರಿ ಜಿಲ್ಲೆ ಸಂಡೂರ ತಾಲೂಕಿನ ತಾಳೂರು ಗ್ರಾಮದಲ್ಲಿ ನಡೆದಿದೆ. ಸುಬಾನಿ ಸಾಬ್ ಎನ್ನುವವರ ಮನೆಯಲ್ಲಿ ಹೊಸ ಸಿಲಿಂಡರ್ ಜೋಡಣೆ ವೇಳೆ ಗ್ಯಾಸ್ ಸೋರಿಕೆಯಾಗಿ ಅವಘಡ ನಡೆದಿದ್ದು, ಗ್ಯಾಸ್ ಲೀಕ್ ಆಗುತ್ತಿದ್ದಂತೆ ಮನೆಯಲ್ಲಿದ್ದ ಕುಟುಂಬಸ್ಥರು ಎಚ್ಚೆತ್ತು ಹೊರಬಂದ ಕಾರಣ, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಸ್ಪೋಟದ ತೀವ್ರತೆಗೆ ಮನೆ ಸಂಪೂರ್ಣ ಛಿದ್ರ ಛಿದ್ರವಾಗಿದ್ದು, ಪಕ್ಕದ ಮನೆಯ ಗೋಡೆಯೂ ಕುಸಿದು ಬಿದ್ದಿದೆ. ಮನೆ ಮಾಲೀಕ ಸುಬಾನಿ ಸಾಬ್ ಸೇರಿದಂತೆ ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಗಾಯಗೊಂಡವರನ್ನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ. ಘಟನಾ ಸ್ಥಳಕ್ಕೆ ತೋರಣಗಲ್ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Mar 02, 2026 01:02 PM
ಉತ್ತರ ಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಮೇಲೆ ಶೂ ಅಟ್ಯಾಕ್
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ಸ್ಟಿಂಗ್ ಆಪರೇಷನ್ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
