ಮನೆ ಕೆಲಸದಾಕೆ ಮೇಲಿನ ದೌರ್ಜನ್ಯ ಪ್ರಕರಣ: ಸುಪ್ರೀಂಕೋರ್ಟ್​​ ನೋಟಿಸ್ ಬಗ್ಗೆ ರೇವಣ್ಣ ಫಸ್ಟ್​​ ರಿಯಾಕ್ಷನ್​​

Edited By:

Updated on: Jul 17, 2026 | 12:22 PM

ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರು ಆಷಾಢ ಮಾಸದ ಮೊದಲ ಶುಕ್ರವಾರದಂದು ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ಚಾಮುಂಡಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮನೆ ಕೆಲಸದಾಕೆ ಮೇಲಿನ ದೌರ್ಜನ್ಯ ಪ್ರಕರಣ ಸಂಬಂಧ ಸುಪ್ರೀಂ ಕೋರ್ಟ್ ನೀಡಿರುವ ನೋಟಿಸ್ ಬಗ್ಗೆ ಪ್ರತಿಕ್ರಿಯಿಸಿದ ಅವರು, ನ್ಯಾಯಾಲಯದ ಬಗ್ಗೆ ತಮಗೆ ನಂಬಿಕೆ ಇದ್ದು, ಸೂಕ್ತ ಸಮಯದಲ್ಲಿ ಎಲ್ಲಾ ವಿಷಯಗಳನ್ನು ಬಹಿರಂಗಪಡಿಸುವುದಾಗಿ ತಿಳಿಸಿದ್ದಾರೆ.

ಮೈಸೂರು, ಜುಲೈ 17: ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರು ಆಷಾಢ ಮಾಸದ ಮೊದಲ ಶುಕ್ರವಾರದಂದು ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ, ಚಾಮುಂಡಿ ತಾಯಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಪೂಜೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ರೇವಣ್ಣ, ಮನೆ ಕೆಲಸದಾಕೆ ಮೇಲಿನ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೋಟಿಸ್ ನೀಡಿರುವ ಕುರಿತು ಪ್ರತಿಕ್ರಿಯಿಸಿದ್ದಾರೆ. ನ್ಯಾಯಾಲಯದ ಬಗ್ಗೆ ನನಗೆ ನಂಬಿಕೆ ಇದೆ. ನಾನು ಯಾವುದೇ ವಿಷಯಕ್ಕೂ ತಲೆಕೆಡಿಸಿಕೊಳ್ಳುವುದಿಲ್ಲ. ಕೆಲವು ಟಿವಿ ವಾಹಿನಿಗಳು ತಮ್ಮನ್ನು ಸಂಕಷ್ಟದಲ್ಲಿದ್ದಾರೆ ಎಂದು ಬಿಂಬಿಸುತ್ತಿವೆ. ಅದೆಲ್ಲ ನನಗೇನು ತೊಂದರೆಯಾಗಿಲ್ಲ. ಸಮಯ ಬಂದಾಗ ಎಲ್ಲವನ್ನೂ ಬಹಿರಂಗಪಡಿಸುತ್ತೇನೆ ಎಂದವರು ತಿಳಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us