AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

32 ವರ್ಷದ ಗಳಿಕೆಯನ್ನೆಲ್ಲ ದೋಚಿಬಿಟ್ಟರು ಸರ್​​: 18 ಕೋಟಿ ಸಂಪತ್ತು ಕಳೆದುಕೊಂಡ ಮನೆ ಮಾಲೀಕ ಭಾವುಕ

32 ವರ್ಷದ ಗಳಿಕೆಯನ್ನೆಲ್ಲ ದೋಚಿಬಿಟ್ಟರು ಸರ್​​: 18 ಕೋಟಿ ಸಂಪತ್ತು ಕಳೆದುಕೊಂಡ ಮನೆ ಮಾಲೀಕ ಭಾವುಕ

ಪ್ರಸನ್ನ ಹೆಗಡೆ
|

Updated on:Jan 28, 2026 | 2:29 PM

Share

ಬೆಂಗಳೂರಿನ ಮಾರತ್ತಹಳ್ಳಿಯ ಯಮಲೂರಿನಲ್ಲಿ ಬಿಲ್ಡರ್ ಶಿವಕುಮಾರ್ ಅವರ ಮನೆಯಲ್ಲಿ 18 ಕೋಟಿ ರೂಪಾಯಿ ಮೌಲ್ಯದ ಚಿನ್ನ, ವಜ್ರ, ಬೆಳ್ಳಿ ಮತ್ತು ನಗದು ಕಳ್ಳತನವಾಗಿದೆ. ಈ ಸಂಪತ್ತು ತನ್ನ ಕಳೆದ 32 ವರ್ಷಗಳ ಶ್ರಮದ ಗಳಿಕೆಯಾಗಿದೆ. ಕುಟುಂಬಕ್ಕೆ ಅವನ್ನು ಹಂಚಿಕೆ ಮಾಡಲು ನಿರ್ಧರಿಸಿದ್ದ ದಿನವೇ ಕಳ್ಳತನ ನಡೆದಿದೆ. ಕಳ್ಳತನವಾದ ವಸ್ತುಗಳಲ್ಲಿ ಮಕ್ಕಳಿಗೆ ಸರ್ಪ್ರೈಸ್ ಆಗಿ ನೀಡಲು ಇಟ್ಟಿದ್ದ ಐಫೋನ್‌ಗಳು ಕೂಡ ಸೇರಿವೆ ಎಂದು ಮನೆ ಮಾಲೀಕರು ತಿಳಿಸಿದ್ದಾರೆ. 

ಬೆಂಗಳೂರು, ಜನವರಿ 28: ಮಾರತ್ತಹಳ್ಳಿಯ ಯಮಲೂರಿನಲ್ಲಿ ಬಿಲ್ಡರ್ ಶಿವಕುಮಾರ್ ಅವರ ಮನೆಯಿಂದ ಸುಮಾರು 18 ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣ, ವಜ್ರ, ಬೆಳ್ಳಿ ಮತ್ತು ನಗದು ಕಳ್ಳತನವಾಗಿದೆ. ಮನೆ ಮಾಲೀಕರು ನೀಡಿದ ಹೇಳಿಕೆಯ ಪ್ರಕಾರ, ದಿನೇಶ್ ಮತ್ತು ಕಮಲಾ ಎಂಬ ನವದಂಪತಿ ಈ ಕೃತ್ಯದಲ್ಲಿ ಭಾಗಿಯಾಗಿದ್ದಾರೆ. ಇವರನ್ನು 20-22 ದಿನಗಳ ಹಿಂದಷ್ಟೇ ಕೆಲಸಕ್ಕೆ ನೇಮಿಸಲಾಗಿತ್ತು. ಕಳ್ಳತನದ ಸಮಯಕ್ಕೆ ಮನೆಯಲ್ಲಿದ್ದ ಇತರರೂ ಭೂಮಿ ಪೂಜೆ ಕಾರ್ಯಕ್ರಮವೊಂದಕ್ಕೆ ಹೋಗಿದ್ದರಿಂದ ಮನೆ ಖಾಲಿಯಾಗಿತ್ತು. ಕಳ್ಳರು ಸಿಸಿಟಿವಿ ಕ್ಯಾಮೆರಾಗಳನ್ನು ನಿಷ್ಕ್ರಿಯಗೊಳಿಸಲು ವಿದ್ಯುತ್ ಸಂಪರ್ಕ, ಯುಪಿಎಸ್ ಮತ್ತು ವೈಫೈ ಅನ್ನು ಆಫ್ ಮಾಡಿದ್ದರು. ಒಟ್ಟು ಐದು ಮಂದಿ ಈ ಕಳ್ಳತನದಲ್ಲಿ ಭಾಗಿಯಾಗಿದ್ದಾರೆ ಎಂದು ಹೇಳಲಾಗಿದ್ದು, ಕಳ್ಳತನವಾದ ವಸ್ತುಗಳಲ್ಲಿ 11.5 ಕೆಜಿ ಚಿನ್ನ, ವಜ್ರ, 5 ಕೆಜಿ ಬೆಳ್ಳಿ ಮತ್ತು 11.5 ಲಕ್ಷ ರೂಪಾಯಿ ನಗದು ಸೇರಿವೆ. ಈ ಸಂಪತ್ತು ತನ್ನ ಕಳೆದ 32 ವರ್ಷಗಳ ಶ್ರಮದ ಗಳಿಕೆಯಾಗಿದೆ. ಕುಟುಂಬಕ್ಕೆ ಅವನ್ನು ಹಂಚಿಕೆ ಮಾಡಲು ನಿರ್ಧರಿಸಿದ್ದ ದಿನವೇ ಕಳ್ಳತನ ನಡೆದಿದೆ. ಕಳ್ಳತನವಾದ ವಸ್ತುಗಳಲ್ಲಿ ಮಕ್ಕಳಿಗೆ ಸರ್ಪ್ರೈಸ್ ಆಗಿ ನೀಡಲು ಇಟ್ಟಿದ್ದ ಐಫೋನ್‌ಗಳು ಕೂಡ ಸೇರಿವೆ ಎಂದು ಮನೆ ಮಾಲೀಕರು ತಿಳಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Jan 28, 2026 02:28 PM