ಹೌಸಿಂಗ್ ಬೋರ್ಡ್ ಕಲೆಕ್ಷನ್ ಬೋರ್ಡ್, ಮನಿ ಕೊಟ್ರೆ ಮನೆ: ಅಶೋಕ್ ವ್ಯಂಗ್ಯ

Updated on: Jun 22, 2025 | 3:31 PM

ಮನೆ ಹಂಚಿಕೆಗೆ ಲಂಚ ನೀಡಬೇಕೆನ್ನುವ ಕಾಂಗ್ರೆಸ್ ಶಾಸಕ ಬಿಆರ್ ಪಾಟೀಲ್ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಸಂಚಲನಕ್ಕೆ ಕಾರಣವಾಗಿದೆ. ಇನ್ನು ಈ ಸಂಬಂಧ ಮಂಡ್ಯದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ವಿಪಕ್ಷ ನಾಯಕ ಆರ್ ಅಶೋಕ್, ಈ ಕಾಂಗ್ರೆಸ್ ಸರ್ಕಾರ ಬಡವರಿಗೆ ಅನ್ನ ಕೊಡಿ ಅಂದ್ರೆ ಬಡವರ ಮನೆಗೆ ಕನ್ನ ಹಾಕಿದೆ . ಈ ಸರ್ಕಾರದಲ್ಲಿ ಹೌಸಿಂಗ್ ಬೋರ್ಡ್ ಕಲೆಕ್ಷನ್ ಬೋರ್ಡ್ ಆಗಿದೆ. ಮನಿ ಕೊಟ್ರೆ ಮನೆ ಎಂಬ ಹೊಸ ಸ್ಲೋಗನ್ ಬಿಟ್ಟಿದ್ದಾರೆ. ವಸತಿ ಇಲಾಖೆಯಲ್ಲಿ ರಕ್ತ ಹೀರುವ ಜಿಗಣೆಗಳು ಸೇರಿಕೊಂಡಿದೆ. ಬಡವರಿಗೆ ಮನೆ ನೀಡುವ ಬದಲು ಸೇಲ್ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಮಂಡ್ಯ, (ಜೂನ್ 22): ಮನೆ ಹಂಚಿಕೆಗೆ ಲಂಚ ನೀಡಬೇಕೆನ್ನುವ ಕಾಂಗ್ರೆಸ್ ಶಾಸಕ ಬಿಆರ್ ಪಾಟೀಲ್ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಸಂಚಲನಕ್ಕೆ ಕಾರಣವಾಗಿದೆ. ಇನ್ನು ಈ ಸಂಬಂಧ ಮಂಡ್ಯದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ವಿಪಕ್ಷ ನಾಯಕ ಆರ್ ಅಶೋಕ್, ಈ ಕಾಂಗ್ರೆಸ್ ಸರ್ಕಾರ ಬಡವರಿಗೆ ಅನ್ನ ಕೊಡಿ ಅಂದ್ರೆ ಬಡವರ ಮನೆಗೆ ಕನ್ನ ಹಾಕಿದೆ . ಈ ಸರ್ಕಾರದಲ್ಲಿ ಹೌಸಿಂಗ್ ಬೋರ್ಡ್ ಕಲೆಕ್ಷನ್ ಬೋರ್ಡ್ ಆಗಿದೆ. ಮನಿ ಕೊಟ್ರೆ ಮನೆ ಎಂಬ ಹೊಸ ಸ್ಲೋಗನ್ ಬಿಟ್ಟಿದ್ದಾರೆ. ವಸತಿ ಇಲಾಖೆಯಲ್ಲಿ ರಕ್ತ ಹೀರುವ ಜಿಗಣೆಗಳು ಸೇರಿಕೊಂಡಿದೆ. ಬಡವರಿಗೆ ಮನೆ ನೀಡುವ ಬದಲು ಸೇಲ್ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.