ಕಂಗಾಲಾಗಿ ಓಡಿದ ಜನ, ಕುಟುಂಬಸ್ಥರ ಕೂಗಾಟ; ಬಾಂಗ್ಲಾದಲ್ಲಿ ಬಸ್ ನದಿಗೆ ಬಿದ್ದಿದ್ದು ಹೇಗೆ?

Updated on: Mar 26, 2026 | 9:44 AM

ಬುಧವಾರ ಸಂಜೆ ಬಾಂಗ್ಲಾದೇಶದ ನೈಋತ್ಯ ಜಿಲ್ಲೆಯ ರಾಜ್ಬರಿಯಲ್ಲಿ ದೌಲಾಡಿಯಾ ಟರ್ಮಿನಲ್‌ನಲ್ಲಿ ಬಸ್ ಅಪಘಾತ ಸಂಭವಿಸಿದೆ. 50 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ರಾಜ್ಬರಿಯಿಂದ ಢಾಕಾದಿಂದ 128 ಕಿಲೋಮೀಟರ್ ದೂರದಲ್ಲಿರುವ ಢಾಕಾಗೆ ಪ್ರಯಾಣಿಸುತ್ತಿತ್ತು. ಬಸ್ ಸಾರಿಗೆ ದೋಣಿಯ ಮೇಲೆ ಹತ್ತುವಾಗ ಈ ಅಪಘಾತ ಸಂಭವಿಸಿದೆ. ಇದರಿಂದ ಬಸ್​​ನಲ್ಲಿದ್ದ ಪ್ರಯಾಣಿಕರು ನೀರಿಗೆ ಬಿದ್ದಿದ್ದಾರೆ. ತಕ್ಷಣ ಅಗ್ನಿಶಾಮಕ ಸೇವೆ ಮತ್ತು ಡೈವರ್‌ಗಳ ರಕ್ಷಣಾ ತಂಡಗಳು ರಕ್ಷಣಾ ಕಾರ್ಯಾಚರಣೆ ನಡೆಸಿ ಹಲವರನ್ನು ರಕ್ಷಿಸಿವೆ.

ಢಾಕಾ, ಮಾರ್ಚ್ 26: ನಿನ್ನೆ ಸಂಜೆ ಬಾಂಗ್ಲಾದೇಶದಲ್ಲಿ (Bangladesh Bus Accident) ಅತಿ ಭೀಕರ ಅಪಘಾತ ಸಂಭವಿಸಿದೆ. ಬಾಂಗ್ಲಾದೇಶದ ರಾಜ್ಪರಿಯಲ್ಲಿ ಒಂದು ದಡದಿಂದ ಮತ್ತೊಂದು ದಡಕ್ಕೆ ಸಾರಿಗೆ ದೋಣಿಯ ಮೂಲಕ ಬಸ್​​ನಲ್ಲಿ ಜನರು ಸಂಚರಿಸುತ್ತಾರೆ. ಇದೇ ರೀತಿ ದೋಣಿಯಲ್ಲಿದ್ದ ಖಾಸಗಿ ಬಸ್​ ಇದ್ದಕ್ಕಿದ್ದಂತೆ ಪದ್ಮಾ ನದಿಗೆ ಉರುಳಿದೆ. ಬಸ್​ನಿಂದ ಹೊರಗಿದ್ದ ಕೆಲವು ಕುಟುಂಬಸ್ಥರು ನೋಡುತ್ತಿದ್ದಂತೆ ಬಸ್​ನೊಳಗಿದ್ದ ಅವರ ಫ್ಯಾಮಿಲಿಯವರು ನೀರಿನಲ್ಲಿ ಮುಳುಗಿದ್ದಾರೆ. ದೋಣಿಯ ಮೇಲೆ ನಿಂತು ಮಕ್ಕಳು, ಕುಟುಂಬಸ್ಥರು ಜೋರಾಗಿ ಕಿರುಚಾಡುತ್ತಾ, ತಮ್ಮ ಮನೆಯವರನ್ನು ಕಾಪಾಡಿ ಎಂದು ಗೋಗರೆಯುತ್ತಿರುವ ವಿಡಿಯೋ ಇಲ್ಲಿದೆ. ಈ ಅಪಘಾತದಲ್ಲಿ 23 ಜನರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಇನ್ನೂ ಹಲವರು ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದಾರೆ. ಅವರಿಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿರುವುದರಿಂದ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published on: Mar 26, 2026 09:43 AM
Loading...
Unable to load recommendations.
Follow Us
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More