ಮಹಾಂತೇಶ ಬೀಳಗಿ ಕಾರು ಅಪಘಾತ ಹೇಗಾಯ್ತು? ಅಪಘಾತದ ಸ್ಥಳ ಹೇಗಿದೆ ನೋಡಿ

Edited By:

Updated on: Nov 26, 2025 | 10:44 AM

ಕಲಬುರಗಿಯಿಂದ ರಾಮದುರ್ಗಕ್ಕೆ ತೆರಳುತ್ತಿದ್ದ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರು ಜೆವರಗಿ ಬೈಪಾಸ್ ಬಳಿ ನಡೆದ ಭೀಕರ ಕಾರು ಅಪಘಾತದಲ್ಲಿ ನಿಧನರಾಗಿದ್ದಾರೆ. ಅಪಘಾತದಲ್ಲಿ ಅವರ ಸ್ನೇಹಿತ ಇರಣ್ಣ ಸಿರಸಂಗಿ ಸೇರಿದಂತೆ ನಾಲ್ವರು ಜೀವ ಕಳೆದುಕೊಂಡಿದ್ದಾರೆ. ಮಹಾಂತೇಶ ಬೀಳಗಿ ಕಾರು ಅಪಘಾತ ಹೇಗಾಯ್ತು? ಅಪಘಾತದ ಸ್ಥಳ ಹೇಗಿದೆ ಎಂಬ ವಿಡಿಯೋ ಇಲ್ಲಿದೆ ನೋಡಿ.

ಕಲಬುರಗಿ, ನವೆಂಬರ್ 26: ಕಲಬುರಗಿ ಬಳಿಯ ಜೆವರ್ಗಿ ಪಟ್ಟಣದ ಹೊರವಲಯದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ರಾಜ್ಯ ಕಂಡ ಜನಸ್ನೇಹಿ ಹಾಗೂ ದಕ್ಷ ಅಧಿಕಾರಿ ಐಎಎಸ್ ಮಹಾಂತೇಶ್ ಬೀಳಗಿ ಅವರು ಮಂಗಳವಾರ ನಿಧನರಾಗಿದ್ದಾರೆ. ವಿಜಯಪುರ ಮಾರ್ಗವಾಗಿ ಬರುತ್ತಿದ್ದ ಅವರ ಇನ್ನೋವಾ ಕಾರು, ಬೈಕ್ ಒಂದನ್ನು ತಪ್ಪಿಸಲು ಹೋಗಿ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯ ತಡೆಗೋಡೆಗೆ ಡಿಕ್ಕಿ ಹೊಡೆದು ಸುಮಾರು ನೂರು ಮೀಟರ್‌ಗಳಷ್ಟು ದೂರ ಎಳೆದುಕೊಂಡು ಹೋಗಿದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣವಾಗಿ ನುಜ್ಜುಗುಜ್ಜಾಗಿದ್ದು, ಏರ್‌ಬ್ಯಾಗ್‌ಗಳು ತೆರೆದುಕೊಂಡಿದ್ದರೂ ಕಾರಿನಲ್ಲಿದ್ದವರು ಸಾವನ್ನಪ್ಪಿದ್ದಾರೆ. ಕಾರಿನಲ್ಲಿ ಐದು ಜನ ಪ್ರಯಾಣಿಸುತ್ತಿದ್ದು, ಐವರಲ್ಲಿ ನಾಲ್ವರು ದುರ್ಮರಣಕ್ಕೀಡಾಗಿದ್ದಾರೆ. ಮಹಾಂತೇಶ್ ಬೀಳಗಿ ಅವರ ಸ್ನೇಹಿತ ಇರಣ್ಣ ಸಿರಸಂಗಿ ಅವರೂ ಸಹ ಸಾವನ್ನಪ್ಪಿರುವುದು ದೃಢಪಟ್ಟಿದೆ. ಅಪಘಾತದ ಸ್ಥಳದಲ್ಲಿ ಮರ ಕಿತ್ತು ಬಂದಿರುವುದು ಕಾರಿನ ವೇಗ ಮತ್ತು ಡಿಕ್ಕಿಯ ಭೀಕರತೆಗೆ ಸಾಕ್ಷಿಯಾಗಿದೆ.

ಇದನ್ನೂ ಓದಿ: ಹೊತ್ತಿನ ಊಟಕ್ಕೂ ಪರದಾಟ, ಕಿರಾಣಿ ಅಂಗಡಿಯಲ್ಲಿ ಕೆಲಸ: ಮಹಾಂತೇಶ್ ಬೀಳಗಿ ಐಎಎಸ್ ಅಧಿಕಾರಿಯಾಗಲು ಪಟ್ಟ ಪಾಡು ಒಂದೇ ಎರಡೇ!

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ