ಹಾಸನಾಂಬೆ ದರ್ಶನಕ್ಕೆ ಹೇಗಿದೆ ವ್ಯವಸ್ಥೆ? ಭಕ್ತರು ಹೇಳೋದೇನು ನೋಡಿ
ಹಾಸನಾಂಬ ದೇಗುಲದ ಗರ್ಭಗುಡಿಯ ಬಾಗಿಲು ಗುರುವಾರ ತೆರೆದಿದ್ದು, ಶುಕ್ರವಾರ ಮುಂಜಾನೆ 6 ಗಂಟೆಯಿಂದ ಭಕ್ತರ ದರ್ಶನಕ್ಕೆ ಅವಕಾಶ ನೀಡಲಾಗಿದೆ. ನಸುಕಿನ 4 ಗಂಟೆಗೆಲ್ಲ ದೇಗುಲಕ್ಕೆ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದಾರೆ. ದೇಗುಲದಲ್ಲಿ ದರ್ಶನಕ್ಕೆ ವ್ಯವಸ್ಥೆ ಹೇಗಿದೆ ಎಂಬ ವಿವರ ಇಲ್ಲಿದೆ ನೋಡಿ.
ಹಾಸನ, ಅಕ್ಟೋಬರ್ 25: ವರ್ಷಕ್ಕೆ ಒಮ್ಮೆ ಮಾತ್ರ ದರ್ಶನ ನೀಡುವ ಹಾಸನದ ಅಧಿದೇವತೆ ಹಾಸನಾಂಬೆಯ ದರ್ಶನ ಇಂದಿನಿಂದ ಭಕ್ತರಿಗೆ ಮುಕ್ತವಾಗಿದೆ. ಮುಂಜಾನೆ 4 ಗಂಟೆಯಿಂದಲೇ ಸಾವಿರಾರು ಸಂಖ್ಯೆಯಲ್ಲಿ ದೇಗುಲಕ್ಕೆ ಬಂದಿರುವ ಭಕ್ತರು ದೇವಿಯ ದರ್ಶನ ಪಡೆಯುತ್ತಿದ್ದಾರೆ. ದೇವಿಯ ದರ್ಶನಕ್ಕೆ ಜಿಲ್ಲಾಡಳಿತ ಸಕಲ ಸಿದ್ಧತೆ ಹಾಗೂ ವ್ಯವಸ್ಥೆ ಮಾಡಿದೆ. ಹಾಸನಾಂಬೆ ದರ್ಶನಕ್ಕೆ ಹೇಗಿದೆ ವ್ಯವಸ್ಥೆ ಎಂಬ ಬಗ್ಗೆ ಮೊದಲ ದಿನ ದೇಗುಲಕ್ಕೆ ಬಂದ ಭಕ್ತರು ‘ಟಿವಿ9’ ಜತೆ ಅಭಿಪ್ರಾಯ ತಿಳಿಸಿದ್ದಾರೆ. ಆ ವಿವರ ಇಲ್ಲಿದೆ, ವಿಡಿಯೋ ನೋಡಿ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Latest Videos