Yuvanidhi Application: ಯುವನಿಧಿ ಸ್ಕೀಂಗೆ ಅರ್ಜಿ ಹಾಕುವುದು ಎಲ್ಲಿ, ಹೇಗೆ?
ವಿಧಾನಸೌಧದ ಬ್ಯಾಂಕ್ವೆಟ್ಹಾಲ್ನಲ್ಲಿ ಯುವನಿಧಿ ಯೋಜನೆಯ ನೋಂದಣಿ ಪ್ರಕ್ರಿಯೆಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ. ಯುವನಿಧಿ ಯೋಜನೆಗೆ ಪ್ರಸಕ್ತ ಸಾಲಿ ವರ್ಷದಲ್ಲಿ 250 ಕೋಟಿ ಹಾಗೂ ಮುಂದಿನ ವರ್ಷಕ್ಕೆ 1,250 ಕೋಟಿ ರೂ. ವೆಚ್ಚ ತಗುಲಲಿದೆ. ಯುವನಿಧಿ ಯೋಜನೆಗೆ ನೋಂದಣಿ ಹೇಗೆ ಮಾಡಿಕೊಳ್ಳಬೇಕು, ಅರ್ಹತೆ ಸೇರಿದಂತೆ ಮುಖ್ಯ ವಿವರ ಇಲ್ಲಿದೆ.
ಬೆಂಗಳೂರು, ಡಿ.26: ವಿಧಾನಸೌಧದ ಬ್ಯಾಂಕ್ವೆಟ್ಹಾಲ್ನಲ್ಲಿ ಯುವನಿಧಿ ಯೋಜನೆಯ ನೋಂದಣಿ ಪ್ರಕ್ರಿಯೆಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ. 5ನೇ ಗ್ಯಾರಂಟಿ ಯೋಜನೆಯ ನೋಂದಣಿ ಪ್ರಕ್ರಿಯೆಗೆ ಚಾಲನೆ ಸಿಕ್ಕಿದೆ. ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಸಚಿವರಾದ ಶರಣಪ್ರಕಾಶ್ ಪಾಟೀಲ್, ಡಾ.ಎಂ.ಸಿ.ಸುಧಾಕರ್, ನಾಗೇಂದ್ರ, ಪ್ರಿಯಾಂಕ್ ಖರ್ಗೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಯುವನಿಧಿಗೆ ಬೇಕಾದ ಅರ್ಹತೆಗಳೇನು?
2022-23ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಪದವಿ ಪಡೆದಿರಬೇಕು. ಈ ಶೈಕ್ಷಣಿಕ ವರ್ಷದಲ್ಲಿ ಪದವಿ ಪಡೆದು 6 ತಿಂಗಳು ಪೂರೈಸಿರಬೇಕು. ಉನ್ನತ ಶಿಕ್ಷಣ ವ್ಯಾಸಂಗಕ್ಕೆ ಸೇರದಿರೋರು ಅರ್ಜಿ ಸಲ್ಲಿಸಬಹುದು. ಯಾವುದೇ ಉದ್ಯೋಗಕ್ಕೆ ಸೇರದೆ ಇರುವವರು ಅರ್ಹರಾಗುತ್ತಾರೆ. ಪದವಿ ಮತ್ತು ಡಿಪ್ಲೋಮಾ ತೇರ್ಗಡೆ ಆದವರಿಗೆ ಮಾತ್ರ ಅವಕಾಶ. ನಿರುದ್ಯೋಗಿ ಪದವೀಧರರಿಗೆ ಮಾಸಿಕ 3 ಸಾವಿರ ಆರ್ಥಿಕ ನೆರವು. ಡಿಪ್ಲೋಮಾ ಪೂರೈಸಿದವರಿಗೆ ಮಾಸಿಕ 1,500 ರೂ. ಆರ್ಥಿಕ ನೆರವು ಸಿಗಲಿದೆ. ಯುವನಿಧಿ ಯೋಜನೆಗೆ ಪ್ರಸಕ್ತ ಸಾಲಿ ವರ್ಷದಲ್ಲಿ 250 ಕೋಟಿ ಹಾಗೂ ಮುಂದಿನ ವರ್ಷಕ್ಕೆ 1,250 ಕೋಟಿ ರೂ. ವೆಚ್ಚ ತಗುಲಲಿದೆ. ಬೆಂಗಳೂರು ಒನ್, ಕರ್ನಾಟಕ ಒನ್, ಸೇವಾಸಿಂಧು ಪೋರ್ಟ್ಗಳಲ್ಲಿ ನೋಂದಣಿ ಮಾಡಿಕೊಳ್ಳಬಹುದಾಗಿದೆ. ಇನ್ನು ಕಾರ್ಯಕ್ರಮದಲ್ಲಿ ಯುವನಿಧಿ ಯೋಜನೆಗೆ ಯಾವ ರೀತಿ ನೋಂದಣಿ ಮಾಡಿಕೊಳ್ಳಬೇಕೆಂದು ತಿಳಿಸಿಕೊಡಲಾಗಿದೆ.
ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ