ಅನರ್ಹ ಬಿಪಿಎಲ್ ಕಾರ್ಡ್ ಪತ್ತೆಹಚ್ಚೋದು ಹೇಗೆ, ವಿಧಾನ ಏನು? ಇಲ್ಲಿದೆ ನೋಡಿ
ಕರ್ನಾಟಕ ಸರ್ಕಾರವು ಅನರ್ಹ ಬಿಪಿಎಲ್ ಕಾರ್ಡ್ಗಳನ್ನು ರದ್ದುಗೊಳಿಸುವ ಕಾರ್ಯಕ್ರಮವನ್ನು ಚುರುಕುಗೊಳಿಸಲಿದ್ದು, ಈಗಾಗಲೇ 12 ಲಕ್ಷಕ್ಕೂ ಅಧಿಕ ಅನುಮಾನಾಸ್ಪದ ಕಾರ್ಡ್ಗಳನ್ನು ಪತ್ತೆ ಮಾಡಿದೆ. ನ್ಯಾಯಬೆಲೆ ಅಂಗಡಿಗಳಲ್ಲಿ ಪರಿಶೀಲನೆ ನಡೆಸಿ, ಅನರ್ಹರನ್ನು ಗುರುತಿಸಿ ಪಡಿತರ ಚೀಟಿಗಳನ್ನು ರದ್ದುಗೊಳಿಸಲಾಗುತ್ತಿದೆ. ಮನೆ ಭೇಟಿ ಮೂಲಕ ದಾಖಲೆಗಳ ಪರಿಶೀಲನೆ ಕೂಡ ನಡೆಯುತ್ತಿದೆ.
ಬೆಂಗಳೂರು, ಸೆಪ್ಟೆಂಬರ್ 17: ಕರ್ನಾಟಕದಲ್ಲಿ ಅನರ್ಹ ಬಿಪಿಎಲ್ ಕಾರ್ಡ್ ರದ್ದುಗೊಳಿಸುವ ಸಂಬಂಧ ಸರ್ಕಾರ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ಈಗಾಗಲೇ 12 ಲಕ್ಷಕ್ಕೂ ಹೆಚ್ಚು ಅನುಮಾನಾಸ್ಪದ ಕಾರ್ಡ್ ಪತ್ತೆ ಹಚ್ಚಿದ್ದು, ಇವುಗಳನ್ನು ರದ್ದುಗೊಳಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಬೆಂಗಳೂರಿನ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದಲ್ಲಿರುವ ಒಂದು ನ್ಯಾಯಬೆಲೆ ಅಂಗಡಿಯಲ್ಲಿ ನಡೆದ ಪರಿಶೀಲನೆ ವೇಳೆ, ಅನರ್ಹ ಫಲಾನುಭವಿಗಳ ಪಟ್ಟಿಯನ್ನು ಪ್ರದರ್ಶಿಸಲಾಗಿದೆ. ಈ ಪಟ್ಟಿಯಲ್ಲಿರುವವರನ್ನು ಗುರುತಿಸಿ, ಅವರ ದಾಖಲೆಗಳನ್ನು ಪರಿಶೀಲಿಸಲಾಗುತ್ತಿದೆ. ಆಧಾರ್ ಕಾರ್ಡ್, ಪಾನ್ ಕಾರ್ಡ್ ಮುಂತಾದ ದಾಖಲೆಗಳನ್ನು ಪರಿಶೀಲಿಸಿ, ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗುತ್ತಿದೆ. ಅನರ್ಹ ಎಂದು ಕಂಡುಬಂದರೆ ಕಾರ್ಡ್ ರದ್ದು ಮತ್ತು ದಂಡ ವಿಧಿಸಲಾಗುತ್ತದೆ. ಇದೇ ವಿಧಾನದ ಪ್ರಕಾರ ಕರ್ನಾಟಕದ ಎಲ್ಲ ಕಡೆ ಅನರ್ಹ ಕಾರ್ಡ್ಗಳ ಪತ್ತೆ ಹಾಗೂ ರದ್ದತಿ ನಡೆಯಲಿದೆ.
ಇದನ್ನೂ ಓದಿ: ಅನರ್ಹ ಬಿಪಿಎಲ್ ಕಾರ್ಡ್ದಾರರಿಗೆ ಶಾಕ್ ನೀಡಲಿದೆ ಆಹಾರ ಇಲಾಖೆ: 12 ಲಕ್ಷ ಪಡಿತರ ಚೀಟಿ ರದ್ದತಿಗೆ ತೆರೆಮರೆಯ ಸಿದ್ಧತೆ

