ಧಾರವಾಡ ಸ್ಪೆಷಲ್ ಹಯಗ್ರೀವ; ಸರಳ ವಿಧಾನದಲ್ಲಿ ಮಾಡಿ ಸವಿಯಿರಿ
ಸಿಹಿಯಾದ ಅಡುಗೆಯನ್ನು ಇಷ್ಟಪಡುವವರು ಇರುತ್ತಾರೆ. ಅಂತೆಯೇ ಖಾರ ಇಷ್ಟಪಡುವವರು ಇರುತ್ತಾರೆ. ಸಿಹಿ ಅಡುಗೆಯನ್ನು ಇಷ್ಟಪಡುವವರಿಗಾಗಿ ಇಂದಿನ ಅಡುಗೆ ಅದುವೆ ಧಾರವಾಡ ಸ್ಪೆಷಲ್ ಹಯಗ್ರೀವ.
ಕಾಲಕ್ಕೆ ವಿಶೇಷವಾದ ಒಂದಷ್ಟು ರೆಸಿಪಿಗಳನ್ನು ತಿಳಿದುಕೊಳ್ಳುವುದು ಮುಖ್ಯ ಎನಿಸಿಕೊಳ್ಳುತ್ತದೆ. ಏಕೆಂದರೆ ರುಚಿಕರವಾದ ಅಡುಗೆಯನ್ನು ಮಾಡುವುದರ ಜೊತೆಗೆ ಹೊಸತೆನೋ ಒಂದನ್ನು ಪ್ರತಿದಿನವು ಪ್ರಯೋಗ ಮಾಡುವುದು ಭೋಜನ ಪ್ರೀಯರಿಗೆ ಹೆಚ್ಚು ಖುಷಿಯನ್ನು ಕೊಡುವ ವಿಚಾರ. ಹಾಗೆಯೇ ಸಿಹಿಯಾದ ಅಡುಗೆಯನ್ನು ಇಷ್ಟಪಡುವವರು ಇರುತ್ತಾರೆ. ಅಂತೆಯೇ ಖಾರ ಇಷ್ಟಪಡುವವರು ಇರುತ್ತಾರೆ. ಸಿಹಿ ಅಡುಗೆಯನ್ನು ಇಷ್ಟಪಡುವವರಿಗಾಗಿ ಇಂದಿನ ಅಡುಗೆ ಅದುವೆ ಧಾರವಾಡ ಸ್ಪೆಷಲ್ ಹಯಗ್ರೀವ.
ಹಯಗ್ರೀವ ಮಾಡಲು ಬೇಕಾಗುವ ಸಾಮಾಗ್ರಿಗಳು ಕಡಲೆ ಬೇಳೆ, ಬೆಲ್ಲ, ಕೊಬ್ಬರಿ ತುರಿ, ಬಾದಾಮಿ, ದ್ರಾಕ್ಷಿ, ಗೋಡಂಬಿ, ಲವಂಗ, ಏಲಕ್ಕಿ ಪುಡಿ, ತುಪ್ಪ.
ಹಯಗ್ರೀವ ಮಾಡುವ ವಿಧಾನ
ಮೊದಲು ಕಡಲೆ ಬೇಳೆಯನ್ನು ಬೇಯಿಸಿಕೊಳ್ಳಬೇಕು, ನಂತರ ಅದನ್ನು ಒಂದು ಪಾತ್ರೆಗೆ ಹಾಕಿ ಕುದಿ ಬರಿಸಿ, ಬಳಿಕ ಅದಕ್ಕೆ ಬೆಲ್ಲ ಹಾಕಿ ಚೆನ್ನಾಗಿ ಕಲಸಿಕೊಳ್ಳಬೇಕು. ಬಳಿಕ ಕೊಬ್ಬರಿ ತುರಿ, ಏಲಕ್ಕಿ, ಲವಂಗ, ಬಾದಾಮಿ, ದ್ರಾಕ್ಷಿ, ಗೋಡಂಬಿ ಹಾಕಿ ಕುದಿಸಿ, ತುಪ್ಪ ಹಾಕಿದರೆ ಧಾರವಾಡ ಸ್ಪೆಷಲ್ ಹಯಗ್ರೀವ ಸವಿಯಲು ಸಿದ್ಧ.
ಇದನ್ನೂ ಓದಿ:
Recipe of the day: ಖಾರ ನಿಪ್ಪಟ್ಟು ಮಾಡುವ ಸರಳ ವಿಧಾನ ತಿಳಿದುಕೊಳ್ಳಿ