Chicken Gravy: ಕರಾವಳಿ ಸ್ಪೆಷಲ್ ಚಿಕನ್ ಗ್ರೇವಿ; ಸರಳ ವಿಧಾನದಲ್ಲಿ ಮಾಡಿ ಸವಿಯಿರಿ
ಚಿಕನ್ ಇಷ್ಟಪಡುವವರು ಹೆಚ್ಚು ವೈವಿಧ್ಯತೆಯನ್ನು ಇಷ್ಟಪಡುತ್ತಾರೆ. ಚಿಕನ್ ಲಿವರ್ ಫ್ರೈ, ಕಬಾಬ್, ಸುಕ್ಕ, ಬಿರಿಯಾನಿ, ಹೀಗೆ ಹಲವು ಬಗೆ ಇದೆ. ಹೀಗಾಗಿ ಕರಾವಳಿ ಸ್ಪೆಷಲ್ ಚಿಕನ್ ಗ್ರೇವಿ ಮಾಡುವುದು ಹೇಗೆ ಎಂದು ಇಂದು ತಿಳಿದುಕೊಳ್ಳೋಣ.
ನಾನ್ ವೆಜ್ ಪ್ರಿಯರಿಗೆ ದಿನಕ್ಕೆ ಒಂದಿಲ್ಲಾ ಒಂದು ಹೊಸ ತರಹದ ಅಡುಗೆಯನ್ನು ಸವಿಯುವ ಬಯಕೆ ಇರುತ್ತದೆ. ಅದರಲ್ಲೂ ಚಿಕನ್ ಇಷ್ಟಪಡುವವರು ಹೆಚ್ಚು ವೈವಿಧ್ಯತೆಯನ್ನು ಇಷ್ಟಪಡುತ್ತಾರೆ. ಚಿಕನ್ ಲಿವರ್ ಫ್ರೈ, ಕಬಾಬ್, ಸುಕ್ಕ, ಬಿರಿಯಾನಿ, ಹೀಗೆ ಹಲವು ಬಗೆ ಇದೆ. ಹೀಗಾಗಿ ಕರಾವಳಿ ಸ್ಪೆಷಲ್ ಚಿಕನ್ ಗ್ರೇವಿ (Chicken Gravy) ಮಾಡುವುದು ಹೇಗೆ ಎಂದು ಇಂದು ತಿಳಿದುಕೊಳ್ಳೋಣ.
ಕರಾವಳಿ ಸ್ಪೆಷಲ್ ಚಿಕನ್ ಗ್ರೇವಿ ಮಾಡಲು ಬೇಕಾದ ಸಾಮಾಗ್ರಿಗಳು ಕೊಬ್ಬರಿ ತುರಿ, ಬ್ಯಾಡಗಿ ಮೆಣಸು, ಲವಂಗ, ದಾಲ್ಚಿನ್ನಿ, ಚಕ್ಕೆ, ಗೋಡಂಬಿ, ಬಿಳಿ ಎಳ್ಳು, ಉಪ್ಪು, ಅಡುಗೆ ಎಣ್ಣೆ, ಹಸಿ ಮೆಣಸಿನಕಾಯಿ, ಶುಂಠಿ, ಬೆಳ್ಳುಳ್ಳಿ, ಕರಿಬೇವು, ಈರುಳ್ಳಿ, ಚಿಕನ್, ಟೊಮೆಟೋ, ಅರಿಶಿಣ ಪುಡಿ, ಖಾರದ ಪುಡಿ, ದನಿಯಾ ಪುಡಿ, ಗರಂ ಮಸಾಲಾ ಪುಡಿ, ಕೊತ್ತಂಬರಿ ಸೊಪ್ಪು.
ಕರಾವಳಿ ಸ್ಪೆಷಲ್ ಚಿಕನ್ ಗ್ರೇವಿ ಮಾಡುವ ವಿಧಾನ
ಮೊದಲು ಒಂದು ಮಿಕ್ಸಿ ಜಾರಿಗೆ ಕೊಬ್ಬರಿ ತುರಿ, ಬ್ಯಾಡಗಿ ಮೆಣಸು, ಲವಂಗ, ದಾಲ್ಚಿನ್ನಿ, ಚಕ್ಕೆ, ಗೋಡಂಬಿ, ಬಿಳಿ ಎಳ್ಳು, ಉಪ್ಪು ಹಾಕಿ ಚೆನ್ನಾಗಿ ರುಬ್ಬಿಕೊಳ್ಳಿ. ಬಳಿಕ ಒಂದು ಪಾತ್ರೆಗೆ ಅಡುಗೆ ಎಣ್ಣೆ ಹಾಕಿ, ಅದು ಕಾದ ಮೇಲೆ ಹಸಿ ಮೆಣಸಿನಕಾಯಿ, ಶುಂಠಿ, ಬೆಳ್ಳುಳ್ಳಿ, ಕರಿಬೇವು, ಈರುಳ್ಳಿ, ಉಪ್ಪು, ಚಿಕನ್ ಹಾಕಿ ಚೆನ್ನಾಗಿ ಫ್ರೈ ಮಾಡಿ. ನಂತರ ಟೊಮೆಟೋ, ಅರಿಶಿಣ ಪುಡಿ, ಖಾರದ ಪುಡಿ, ದನಿಯಾ ಪುಡಿ, ಗರಂ ಮಸಾಲಾ ಪುಡಿ ಹಾಕಿ ಮಿಕ್ಸ್ ಮಾಡಿ. ನಂತರ ರುಬ್ಬಿದ ಮಿಶ್ರಣ ಹಾಕಿ ಚೆನ್ನಾಗಿ ಕುದಿಸಿ, ಬಳಿಕ ಕೊತ್ತಂಬರಿ ಸೊಪ್ಪನ್ನು ಅದರ ಮೇಲೆ ಹಾಕಿದರೆ, ರುಚಿಕರವಾದ ಕರಾವಳಿ ಸ್ಪೆಷಲ್ ಚಿಕನ್ ಗ್ರೇವಿ ಸವಿಯಲು ಸಿದ್ಧ.
ಇದನ್ನೂ ಓದಿ:
ಮಲೆನಾಡಿನ ಸ್ಪೆಷಲ್ ಚಿಕನ್ ಕೀಮಾ ಬಾಲ್ಸ್; ಸರಳ ವಿಧಾನದಲ್ಲಿ ಮಾಡಿ ಸವಿಯಿರಿ
ಭಾನುವಾರದ ಸ್ಪೆಷಲ್ ಚಿಕನ್ ಚಿಲ್ಲಿ ಪೆಪ್ಪರ್: ಸರಳ ವಿಧಾನದಲ್ಲಿ ಇಂದೇ ಮಾಡಿ ಸವಿಯಿರಿ