ಗಣೇಶ ಹಬ್ಬದ ಸ್ಪೆಷಲ್ ಕರ್ಜಿಕಾಯಿ; ರುಚಿಕರವಾದ ತಿಂಡಿ ಮಾಡಿ ಸವಿಯಿರಿ
ರುಚಿಕರವಾದ ಅಡುಗೆಯನ್ನು ಮಾಡುವುದರ ಜೊತೆಗೆ ಹೊಸತೆನೋ ಒಂದನ್ನು ಪ್ರತಿದಿನವು ಪ್ರಯೋಗ ಮಾಡುವುದು ಭೋಜನ ಪ್ರೀಯರಿಗೆ ಹೆಚ್ಚು ಖುಷಿಯನ್ನು ಕೊಡುವ ವಿಚಾರ.
ಕಾಲಕ್ಕೆ ವಿಶೇಷವಾದ ಒಂದಷ್ಟು ರೆಸಿಪಿಗಳನ್ನು ತಿಳಿದುಕೊಳ್ಳುವುದು ಮುಖ್ಯ ಎನಿಸಿಕೊಳ್ಳುತ್ತದೆ. ಏಕೆಂದರೆ ರುಚಿಕರವಾದ ಅಡುಗೆಯನ್ನು ಮಾಡುವುದರ ಜೊತೆಗೆ ಹೊಸತೆನೋ ಒಂದನ್ನು ಪ್ರತಿದಿನವು ಪ್ರಯೋಗ ಮಾಡುವುದು ಭೋಜನ ಪ್ರೀಯರಿಗೆ ಹೆಚ್ಚು ಖುಷಿಯನ್ನು ಕೊಡುವ ವಿಚಾರ. ಹಾಗೆಯೇ ಸಿಹಿಯಾದ ಅಡುಗೆಯನ್ನು ಇಷ್ಟಪಡುವವರು ಇರುತ್ತಾರೆ. ಅಂತೆಯೇ ಕಾರ ಇಷ್ಟಪಡುವವರು ಇರುತ್ತಾರೆ. ಸಿಹಿ ಅಡುಗೆಯನ್ನು ಇಷ್ಟಪಡುವವರಿಗಾಗಿ ಇಂದಿನ ಅಡುಗೆ ಅದುವೆ ಕರ್ಜಿಕಾಯಿ.
ಕರ್ಜಿಕಾಯಿ ಮಾಡಲು ಬೇಕಾಗುವ ಸಾಮಾಗ್ರಿಗಳು ಮೈದಾ ಹಿಟ್ಟು, ಚಿರೋಟಿ ರವೆ, ಉಪ್ಪು, ತುಪ್ಪ, ಹಾಲು, ಸಕ್ಕರೆ ಪುಡಿ, ಏಲಕ್ಕಿ ಪುಡಿ, ಬಾದಾಮಿ, ಗೋಡಂಬಿ, ಎಳ್ಳು, ಕೊಬ್ಬರಿ.
ಕರ್ಜಿಕಾಯಿ ಮಾಡುವ ವಿಧಾನ
ಮೊದಲು ಒಂದು ಪಾತ್ರೆಗೆ ಮೈದಾ ಹಿಟ್ಟು, ಚಿರೋಟಿ ರವೆ, ಉಪ್ಪು, ತುಪ್ಪ, ಹಾಲು ಹಾಕಿ ಚೆನ್ನಾಗಿ ಕಲಸಿಟ್ಟುಕೊಳ್ಳಿ. ಬಳಿಕ ಇನ್ನೊಂದು ಪಾತ್ರೆಗೆ ತುರಿದ ಕೊಬ್ಬರಿ, ಸಕ್ಕರೆ ಪುಡಿ, ಏಲಕ್ಕಿ ಪುಡಿ, ಬಾದಾಮಿ, ಗೋಡಂಬಿ, ಬಿಳಿ ಎಳ್ಳು ಹಾಕಿ ಚೆನ್ನಾಗಿ ಕಲಸಿ ಹೂರ್ಣ ಮಾಡಿಕೊಳ್ಳಿ. ಬಳಿಕ ಒಂದು ಪಾತ್ರೆಗೆ ಎಣ್ಣೆ ಹಾಕಿ ಅದು ಕಾದ ಮೇಲೆ ಪುರಿ ಹದಕ್ಕೆ ಮೈದಾ ಹಿಟ್ಟು ಲಟ್ಟಿಸಿಕೊಂಡು, ಮಧ್ಯದಲ್ಲಿ ಹೂರ್ಣ ಹಾಕಿ ಕರ್ಜಿಕಾಯಿ ಅಚ್ಚಿನಲ್ಲಿ ಮಾಡಿ ಎಣ್ಣೆಯಲ್ಲಿ ಕರಿಯಿರಿ. ಈಗ ರುಚಿಕರವಾದ ಕರ್ಜಿಕಾಯಿ ಸವಿಯಲು ಸಿದ್ಧ.
ಇದನ್ನೂ ಓದಿ:
ಕ್ಯಾರೆಟ್ ಹೋಳಿಗೆ; ಸರಳವಾದ ವಿಧಾನದಲ್ಲಿ ಮಾಡಿ ಸವಿಯಿರಿ