ಉತ್ತರ ಕರ್ನಾಟಕ ಸ್ಪೆಷಲ್ ಮೆಂತೆ ಸೊಪ್ಪು ಕಡಬು; ಸರಳ ವಿಧಾನದಲ್ಲಿ ಮಾಡಿ ಸವಿಯಿರಿ
ಸಿಹಿಯಾದ ಅಡುಗೆಯನ್ನು ಇಷ್ಟಪಡುವವರು ಇರುತ್ತಾರೆ. ಅಂತೆಯೇ ಕಾರ ಇಷ್ಟಪಡುವವರು ಇರುತ್ತಾರೆ. ಇನ್ನು ಆರೋಗ್ಯಕರವಾದ ಅಡುಗೆ ಇಷ್ಟಪಡುವವರು ಇರುತ್ತಾರೆ. ಹೀಗಾಗಿ ಇಂದು ನಾವು ಮೆಂತೆ ಸೊಪ್ಪು ಕಡಬು ಮಾಡುವುದು ಹೇಗೆ ಎಂದು ತಿಳಿದುಕೊಳ್ಳೋಣ.
ಕಾಲಕ್ಕೆ ವಿಶೇಷವಾದ ಒಂದಷ್ಟು ರೆಸಿಪಿಗಳನ್ನು ತಿಳಿದುಕೊಳ್ಳುವುದು ಮುಖ್ಯ ಎನಿಸಿಕೊಳ್ಳುತ್ತದೆ. ಏಕೆಂದರೆ ರುಚಿಕರವಾದ ಅಡುಗೆಯನ್ನು( Cooking) ಮಾಡುವುದರ ಜೊತೆಗೆ ಹೊಸತೆನೋ ಒಂದನ್ನು ಪ್ರತಿದಿನವು ಪ್ರಯೋಗ ಮಾಡುವುದು ಭೋಜನ ಪ್ರೀಯರಿಗೆ ಹೆಚ್ಚು ಖುಷಿಯನ್ನು ಕೊಡುವ ವಿಚಾರ. ಹಾಗೆಯೇ ಸಿಹಿಯಾದ ಅಡುಗೆಯನ್ನು ಇಷ್ಟಪಡುವವರು ಇರುತ್ತಾರೆ. ಅಂತೆಯೇ ಕಾರ ಇಷ್ಟಪಡುವವರು ಇರುತ್ತಾರೆ. ಇನ್ನು ಆರೋಗ್ಯಕರವಾದ ಅಡುಗೆ ಇಷ್ಟಪಡುವವರು ಇರುತ್ತಾರೆ. ಹೀಗಾಗಿ ಇಂದು ನಾವು ಮೆಂತೆ ಸೊಪ್ಪು ಕಡಬು ಮಾಡುವುದು ಹೇಗೆ ಎಂದು ತಿಳಿದುಕೊಳ್ಳೋಣ.
ಮೆಂತೆ ಸೊಪ್ಪು ಕಡಬು ಮಾಡಲು ಬೇಕಾಗುವ ಸಾಮಾಗ್ರಿಗಳು ಗೋಧಿ ಹಿಟ್ಟು, ಜೀರಿಗೆ, ಬೆಳ್ಳುಳ್ಳಿ, ಹಸಿ ಮೆಣಸಿನಕಾಯಿ, ಮೆಂತೆ ಸೊಪ್ಪು, ಉಪ್ಪು
ಮೆಂತೆ ಸೊಪ್ಪು ಕಡಬು ಮಾಡುವ ವಿಧಾನ
ಗೋಧಿ ಹಿಟ್ಟನ್ನು ಸಣ್ಣ ಸಣ್ಣ ತುಂಡುಗಳನ್ನಾಗಿ ಮಾಡಿಕೊಳ್ಳಿ. ನಂತರ ನೀರು ಕಾಯಲು ಬಿಟ್ಟು, ಉಪ್ಪು ಮತ್ತು ಅಡುಗೆ ಎಣ್ಣೆ ಹಾಕಿ ಬಳಿಕ ಗೋಧಿ ಹಿಟ್ಟಿನಿಂದ ಮಾಡಿದ ಉಂಡೆಗಳನ್ನು ಹಾಕಿ 5 ನಿಮಿಷ ಬೇಯಿಸಿ. ಬಳಿಕ ಒಂದು ಪಾತ್ರೆ ಇಟ್ಟು ಅದು ಕಾದ ಮೇಲೆ ಅಡುಗೆ ಎಣ್ಣೆ ಹಾಕಿ, ಜೀರಿಗೆ, ಬೆಳ್ಳುಳ್ಳಿ, ಹಸಿ ಮೆಣಸಿನಕಾಯಿ ಪೇಸ್ಟ್, ಮೆಂತೆ ಸೊಪ್ಪು, ಉಪ್ಪು ಹಾಕಿ ಚೆನ್ನಾಗಿ ಬೇಯಿಸಿ, ಬಳಿಕ ಬೇಯಿಸಿದ ಗೋಧಿ ಹಿಟ್ಟು ಉಂಡೆಯನ್ನು ಹಾಕಿ ಕಲಸಿಕೊಳ್ಳಿ. ಈಗ ರುಚಿಕರವಾದ ಮೆಂತೆ ಸೊಪ್ಪಿನ ಕಡಬು ಸವಿಯಲು ಸಿದ್ಧ.
ಇದನ್ನೂ ಓದಿ:
ಉತ್ತರ ಕರ್ನಾಟಕ ಸ್ಪೆಷಲ್ ಶೇಂಗಾ ಹೋಳಿಗೆ; ಸರಳ ವಿಧಾನದಲ್ಲಿ ಮಾಡಿ ಸವಿಯಿರಿ
ಹುರುಳಿಕಾಳು ಅಂಗ್ರೀವಾ; ಸರಳ ವಿಧಾನದಲ್ಲಿ ಮಾಡಿ ಸವಿಯಿರಿ
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್ಗಂಜ್ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು

