ಶಿವಮೊಗ್ಗ ದಸರಾ ಆನೆ ಅವಘಡ ಬೆನ್ನಲ್ಲೇ ಎಚ್ಚೆತ್ತ ಅರಣ್ಯ ಇಲಾಖೆ: ಜಂಬೂಸವಾರಿಗೆ ಹೊಸ ರೂಲ್ಸ್
ಶಿವಮೊಗ್ಗ ದಸರಾ ಜಂಬೂಸವಾರಿ ವೇಳೆ ಅಂಬಾರಿ ಹೊತ್ತಿದ್ದ ಸೋಮಣ್ಣ ಆನೆ ಏಕಾಏಕಿ ಬೆದರಿ ಓಡಿದ ಘಟನೆ ನಡೆದಿದೆ. ಈ ಘಟನೆಯಲ್ಲಿ ಕಾರು, ಬೈಕ್ಗಳಿಗೆ ಹಾನಿಯಾಗಿದೆ. ಇನ್ನು ಬೆಳ್ಳಿಯ ಅಂಬಾರಿಗೂ ಸಹ ಹಾನಿಯಾಗಿದೆ. ಇನ್ನು ಈ ಘಟನೆ ಬೆನ್ನಲ್ಲೇ ಎಚ್ಚೆತ್ತ ಅರಣ್ಯ ಇಲಾಖೆ, ಜಂಬೂಸವಾರಿಗೆ ನಿಯಮಗಳನ್ನು ರೂಪಿಸಿದೆ. ಈ ಬಗ್ಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದು, ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಕಟ್ಟುನಿಟ್ಟಿನ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದ್ದಾರೆ.
ಬೆಂಗಳೂರು, (ಅಕ್ಟೋಬರ್ 21): ಶಿವಮೊಗ್ಗ ದಸರಾ ಜಂಬೂಸವಾರಿ ವೇಳೆ ಅಂಬಾರಿ ಹೊತ್ತಿದ್ದ ಸೋಮಣ್ಣ ಆನೆ ಏಕಾಏಕಿ ಬೆದರಿ ಓಡಿದ ಘಟನೆ ನಡೆದಿದೆ. ಈ ಘಟನೆಯಲ್ಲಿ ಕಾರು, ಬೈಕ್ಗಳಿಗೆ ಹಾನಿಯಾಗಿದೆ. ಇನ್ನು ಬೆಳ್ಳಿಯ ಅಂಬಾರಿಗೂ ಸಹ ಹಾನಿಯಾಗಿದೆ. ಇನ್ನು ಈ ಘಟನೆ ಬೆನ್ನಲ್ಲೇ ಎಚ್ಚೆತ್ತ ಅರಣ್ಯ ಇಲಾಖೆ, ಜಂಬೂಸವಾರಿಗೆ ನಿಯಮಗಳನ್ನು ರೂಪಿಸಿದೆ. ಈ ಬಗ್ಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದು, ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಕಟ್ಟುನಿಟ್ಟಿನ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದ್ದಾರೆ.
ಮುಂದಿನ ವರ್ಷದಿಂದ ದಸರಾ (Dasara) ಜಂಬೂಸವಾರಿ ನಡೆಸುವ ಮೊದಲು ಆನೆಗಳಿಗೆ ಕನಿಷ್ಠ 20 ದಿನಗಳಿಂದ ಒಂದು ತಿಂಗಳವರೆಗೆ ನುರಿತ ಮಾವುತರು ಹಾಗೂ ಕಾವಾಡಿಗರ ನೇತೃತ್ವದಲ್ಲಿ ಕಡ್ಡಾಯವಾಗಿ ತಾಲೀಮು ನಡೆಸುವ ವ್ಯವಸ್ಥೆ ಕಲ್ಪಿಸುವಂತೆ ಅರಣ್ಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Loading...
Unable to load recommendations.
Follow Us
