AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಂಗಾಳದ ಹೌರಾದಲ್ಲಿ ಟಿಎಂಸಿ ನಾಯಕನಿಗೆ ಹಿಗ್ಗಾಮುಗ್ಗ ಥಳಿತ

ಬಂಗಾಳದ ಹೌರಾದಲ್ಲಿ ಟಿಎಂಸಿ ನಾಯಕನಿಗೆ ಹಿಗ್ಗಾಮುಗ್ಗ ಥಳಿತ

ಸುಷ್ಮಾ ಚಕ್ರೆ
|

Updated on: May 05, 2026 | 8:47 PM

Share

ಬಿಜೆಪಿ 294 ಸದಸ್ಯರ ವಿಧಾನಸಭೆಯಲ್ಲಿ 207 ಸ್ಥಾನಗಳನ್ನು ಗಳಿಸಿದ ಒಂದು ದಿನದ ನಂತರ ಈ ಬೆಳವಣಿಗೆ ಸಂಭವಿಸಿದೆ. ಪಶ್ಚಿಮ ಬಂಗಾಳದಲ್ಲಿ ಟಿಎಂಸಿಯ ನಿರಂತರ 15 ವರ್ಷಗಳ ಆಡಳಿತವನ್ನು ಕೊನೆಗೊಳಿಸಿತು. ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಭರ್ಜರಿ ವಿಜಯವನ್ನು ಆಚರಿಸುತ್ತಿದ್ದಂತೆ ಸೋಮವಾರ ಪಶ್ಚಿಮ ಬಂಗಾಳದಾದ್ಯಂತ ಅನೇಕ ಟಿಎಂಸಿ ಕಚೇರಿಗಳಿಗೆ ಬೆಂಕಿ ಹಚ್ಚಲಾಯಿತು. ಬಂಗಾಳದಲ್ಲಿ ಬಿಜೆಪಿ ಗೆಲುವಿನ ಬಳಿಕ ಟಿಎಂಸಿ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ತೀವ್ರ ವಾಗ್ವಾದ ನಡೆದ ನಂತರ ಈ ಹಲ್ಲೆ ನಡೆಸಲಾಗಿದೆ ಎಂದು ವರದಿಯಾಗಿದೆ.

ಹೌರಾ, ಮೇ 5: ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ (West Bengal Elections Results) ನಂತರ ಹೌರಾದಲ್ಲಿ ಮಾಜಿ ಟಿಎಂಸಿ ಕೌನ್ಸಿಲರ್ ಮೇಲೆ ದಾಳಿ ನಡೆಸಲಾಗಿದೆ. ಇಂದು ಸಂಜೆ ಪಶ್ಚಿಮ ಬಂಗಾಳದ ಹೌರಾ ಜಿಲ್ಲೆಯಲ್ಲಿ ಮಾಜಿ ತೃಣಮೂಲ ಕಾಂಗ್ರೆಸ್ ಕೌನ್ಸಿಲರ್ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ. ಈ ವಿಡಿಯೋ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಶ್ಯಾಮಲ್ ಮಿತ್ರ ವಾರ್ಡ್ ಸಂಖ್ಯೆ 26ರ ಮಾಜಿ ಕೌನ್ಸಿಲರ್ ಆಗಿದ್ದರು ಮತ್ತು ಸ್ಥಳೀಯ ಟಿಎಂಸಿ ನಾಯಕರಾಗಿದ್ದರು. ಬಂಗಾಳದಲ್ಲಿ ಬಿಜೆಪಿ ಗೆಲುವಿನ ಬಳಿಕ ಟಿಎಂಸಿ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ತೀವ್ರ ವಾಗ್ವಾದ ನಡೆದ ನಂತರ ಈ ಹಲ್ಲೆ ನಡೆಸಲಾಗಿದೆ ಎಂದು ವರದಿಯಾಗಿದೆ.

ಬಿಜೆಪಿ 294 ಸದಸ್ಯರ ವಿಧಾನಸಭೆಯಲ್ಲಿ 207 ಸ್ಥಾನಗಳನ್ನು ಗಳಿಸಿದ ಒಂದು ದಿನದ ನಂತರ ಈ ಬೆಳವಣಿಗೆ ಸಂಭವಿಸಿದೆ. ಪಶ್ಚಿಮ ಬಂಗಾಳದಲ್ಲಿ ಟಿಎಂಸಿಯ ನಿರಂತರ 15 ವರ್ಷಗಳ ಆಡಳಿತವನ್ನು ಕೊನೆಗೊಳಿಸಿತು. ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಭರ್ಜರಿ ವಿಜಯವನ್ನು ಆಚರಿಸುತ್ತಿದ್ದಂತೆ ಸೋಮವಾರ ಪಶ್ಚಿಮ ಬಂಗಾಳದಾದ್ಯಂತ ಅನೇಕ ಟಿಎಂಸಿ ಕಚೇರಿಗಳಿಗೆ ಬೆಂಕಿ ಹಚ್ಚಲಾಯಿತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us