HS Doreswamy Profile: ಎಚ್ ಎಸ್ ದೊರೆಸ್ವಾಮಿ ಹೃದಯಾಘಾತದಿಂದ ನಿಧನ; ವಿಡಿಯೋ ವ್ಯಕ್ತಿ ಚಿತ್ರಣ ಇಲ್ಲಿದೆ
HS Doreswamy Profile: ಸಾಮಾಜಿಕ ಹೋರಾಟಗಾರ ಎಚ್ ಎಸ್ ದೊರೆಸ್ವಾಮಿ ಹೃದಯಾಘಾತದಿಂದ ನಿಧನ; ವಿಡಿಯೋ ವ್ಯಕ್ತಿ ಚಿತ್ರಣ ಇಲ್ಲಿದೆ
HS Doreswamy Profile: ಸಾಮಾಜಿಕ ಹೋರಾಟಗಾರ ಎಚ್ ಎಸ್ ದೊರೆಸ್ವಾಮಿ ಹೃದಯಾಘಾತದಿಂದ ನಿಧನ; ವಿಡಿಯೋ ವ್ಯಕ್ತಿ ಚಿತ್ರಣ ಇಲ್ಲಿದೆ:
ಎಚ್.ಎಸ್.ದೊರೆಸ್ವಾಮಿ ಅವರ ಪೂರ್ತಿ ಹೆಸರು ಹಾರೊಹಳ್ಳಿ ಶ್ರೀನಿವಾಸಯ್ಯ ದೊರೆಸ್ವಾಮಿ. ಏಪ್ರಿಲ್ 10, 1918ರಲ್ಲಿ ಜನಿಸಿದ್ದ ಅವರು ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡಿದ್ದರು. ಬ್ರಿಟಿಷರ ಕಾಲದಲ್ಲಿ ಕನ್ನಡದದ ಜನಪ್ರಿಯ ಪತ್ರಿಕೆ ಎನಿಸಿದ್ದ ‘ಪೌರವಾಣಿ’ ವರದಿಗಾರರಾಗಿ ಜನಪ್ರಿಯರಾಗಿದ್ದರು. ಸಾಹಿತ್ಯ ಮಂದಿರದ ಮೂಲಕ ಹಲವು ಪುಸ್ತಕಗಳನ್ನು ಪ್ರಕಟಿಸಿದ್ದರು. ಇತಿಹಾಸಕಾರ ರಾಮಚಂದ್ರ ಗುಹಾ ಅವರು ದೊರೆಸ್ವಾಮಿ ಅವರನ್ನು ಗೌರವಿಸುತ್ತಿದ್ದರು. ‘ದೊರೆಸ್ವಾಮಿ ಅಂದ್ರೆ ಕರ್ನಾಟಕದ ಸಾಕ್ಷಿಪ್ರಜ್ಞೆ’ ಎಂದು ಗುಹಾ ಬಣ್ಣಿಸಿದ್ದರು.
ಅಂದಿನ ಮೈಸೂರು ಪ್ರಾಂತ್ಯದಲ್ಲಿದ್ದ ಕನಕಪುರ ತಾಲ್ಲೂಕು ಹಾರೋಹಳ್ಳಿ ದೊರೆಸ್ವಾಮಿ ಅವರ ಜನ್ಮಸ್ಥಳ. ಕೇವಲ 5 ವರ್ಷದವರಿದ್ದಾಗ ತಮ್ಮ ತಂದೆ-ತಾಯಿಯನ್ನು ಕಳೆದುಕೊಂಡರು. ತಾತ ಶ್ಯಾನುಭೋಗ ಶಾಮಣ್ಣ ಅವರ ಪಾಲನೆಯಲ್ಲಿ ದೊರೆಸ್ವಾಮಿ ದೊಡ್ಡವರಾದರು. ದೊರೆಸ್ವಾಮಿ ಅವರ ಅಣ್ಣ ಸೀತಾರಾಮ್ ಬೆಂಗಳೂರಿನ ಮೇಯರ್ ಆಗಿದ್ದರು.
(HS Doreswamy Obituary Freedom Fighter H S Doreswamy biography of 104 years old freedom fighter who passed away today)