ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ ಪ್ರಕರಣ: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು ನೋಡಿ!
ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆಯ ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ ಪ್ರಕರಣ ಸಂಬಂಧ ಬೆಂಗಳೂರಿನಲ್ಲಿ ಗೃಹ ಸಚಿವ ಡಾ. ಜಿ ಪರಮೇಶ್ವರ ಪ್ರತಿಕ್ರಿಯೆ ನೀಡಿದ್ದು, ಪೊಲೀಸ್ ಆಯುಕ್ತರೇ ಸ್ಪಷ್ಟನೆ ನೀಡಿದ್ದಾರೆ. ಹಾಗಿದ್ದ ಮೇಲೆ ಇದನ್ನು ರಾಜಕೀಯ ಮಾಡುವುದು ಸರಿಯಲ್ಲ. ಈ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡಬಾರದು ಎಂದರು.
ಬೆಂಗಳೂರು, ಜನವರಿ 8: ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆಯ ಮೇಲೆ ಹಲ್ಲೆ ಹಾಗೂ ವಿವಸ್ತ್ರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದು, ಪ್ರಕರಣದ ಬಗ್ಗೆ ಹುಬ್ಬಳ್ಳಿ ಪೊಲೀಸ್ ಕಮಿಷನರ್ ಶಶಿಕುಮಾರ್ ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ ಎಂದರು. ಒಬ್ಬ ಪೊಲೀಸ್ ಕಮಿಷನರ್ ಪ್ರಕರಣದ ಕುರಿತು ಅಧಿಕೃತವಾಗಿ ಹೇಳಿಕೆ ನೀಡಿದ ಬಳಿಕ ಇನ್ನೇನು ಅನುಮಾನಕ್ಕೆ ಅವಕಾಶ ಇದೆ? ಪೊಲೀಸರು ಆಕೆಯನ್ನು ವಿವಸ್ತ್ರ ಮಾಡಿಲ್ಲ. ಆಕೆಯೇ ಸ್ವಯಂವಾಗಿ ಬಟ್ಟೆ ತೆಗೆದುಕೊಂಡಿದ್ದಾಳೆ ಎಂದು ಕಮಿಷನರ್ ಹೇಳಿದ್ದಾರೆ ಎಂದು ಗೃಹ ಸಚಿವರು ತಿಳಿಸಿದರು.
ಈ ವಿಷಯದಲ್ಲಿ ಬಿಜೆಪಿಯವರು ಅನಗತ್ಯ ರಾಜಕೀಯ ಮಾಡಬಾರದು ಎಂದು ಪರಮೇಶ್ವರ್ ಹೇಳಿದರು. ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಯೇ ವಿವರವಾಗಿ ಸ್ಪಷ್ಟನೆ ನೀಡಿರುವಾಗ, ಮತ್ತೆ ಇದನ್ನು ರಾಜಕೀಯ ವಿಚಾರವನ್ನಾಗಿ ಮಾಡುವುದು ಸರಿಯಲ್ಲ. ಸತ್ಯ ಹೊರಬರಬೇಕು, ಆದರೆ ಅದನ್ನು ರಾಜಕೀಯ ಲಾಭಕ್ಕೆ ಬಳಸಿಕೊಳ್ಳಬಾರದು ಎಂದು ಹೇಳಿದರು.

