ಬಿಜೆಪಿ ಕಾರ್ಯಕರ್ತೆ ವಿವಸ್ತ್ರಗೊಳಿಸಿದ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ

Edited By:

Updated on: Jan 08, 2026 | 6:10 PM

ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆ ಮೇಲೆ ಹಲ್ಲೆ ಮತ್ತು ಬಟ್ಟೆ ಬಿಚ್ಚಿಸಿದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಪಾಲಿಕೆ ಸದಸ್ಯೆ ಸುವರ್ಣಾ ಕಲಕುಂಟ್ಲಾ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಶಕ್ಕೆ ಪಡೆಯುವ ವೇಳೆ ಕಲಕುಂಟ್ಲಾ ಕುಸಿದುಬಿದ್ದಿದ್ದು, ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಡಿಯೋ ನೋಡಿ.

ಹುಬ್ಬಳ್ಳಿ, ಜನವರಿ 08: ನಗರದಲ್ಲಿ ಬಿಜೆಪಿ ಕಾರ್ಯಕರ್ತೆ ಬಟ್ಟೆ ಬಿಚ್ಚಿಸಿ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಪತ್ತೆಯಾಗಿದ್ದ ಕಾಂಗ್ರೆಸ್ ಪಾಲಿಕೆ ಸದಸ್ಯೆ ಸುವರ್ಣ ಕಲಕುಂಟ್ಲಾರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಹುಬ್ಬಳ್ಳಿಯ ಕೇಶ್ವಾಪುರ ಪೊಲೀಸ್​ ಠಾಣೆಯಲ್ಲಿ ನಿನ್ನೆ ರಾತ್ರಿ ಸುವರ್ಣಾ ಕಲಕುಂಟ್ಲಾ ವಿರುದ್ಧ ದೂರು ದಾಖಲಾಗಿತ್ತು. ದೂರು ದಾಖಲಾಗುತ್ತಿದ್ದಂತೆ ನಾಪತ್ತೆಯಾಗಿದ್ದರು. ಹುಬ್ಬಳ್ಳಿ ಹೊರವಲಯದಲ್ಲಿ ಪೊಲೀಸರು ವಶಕ್ಕೆ ಪಡೆಯಲು ಮುಂದಾದ ವೇಳೆ ಕುಸಿದು ಬಿದಿದ್ದಾರೆ. ಆರೋಗ್ಯದಲ್ಲಿ ಏರುಪೇರು ಹಿನ್ನೆಲೆ ಕಿಮ್ಸ್​ಗೆ ಕರೆತಂದು ಚಿಕಿತ್ಸೆ ನೀಡಲಾಗಿದೆ. ಇನ್ನು ಪ್ರಕರಣ ಸದ್ಯ ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಿದ್ದು, ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಗೃಹ ಸಚಿವ ಜಿ. ಪರಮೇಶ್ವರ್ ಮಾಹಿತಿ ನೀಡಿದ್ದಾರೆ.