ರೈತ ಹೋರಾಟಗಾರ ಕೋಡಿಹಳ್ಳಿ ಚಂದ್ರಶೇಖರ್ಗೆ 14 ದಿನ ನ್ಯಾಯಾಂಗ ಬಂಧನ, ಇಲ್ಲಿದೆ ಕೇಸಿನ ವಿವರ
ಕಳಸಾ ಬಂಡೂರಿ ಯೋಜನೆ ಜಾರಿಗೆ ಆಗ್ರಹಿಸಿ 2013ರಲ್ಲಿ ರೈಲು ತಡೆ ನಡೆಸಿದ್ದ ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ಹುಬ್ಬಳ್ಳಿ ಪೊಲೀಸರು ಬಂಧಿಸಿ ಕೋರ್ಟ್ಗೆ ಹಾಜರುಪಡಿಸಿದ್ದು, ಇಂದು (ಸೆಪ್ಟೆಂಬರ್ 28) ಹುಬ್ಬಳ್ಳಿ ಜೆಎಂಎಫ್ಸಿ ನ್ಯಾಯಾಲಯವು ಕೋಡಿಹಳ್ಳಿ ಚಂದ್ರಶೇಖರ್ ಅವರಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ.
ಹುಬ್ಬಳ್ಳಿ, ಸೆಪ್ಟೆಂಬರ್ 28): ಕಳಸಾ ಬಂಡೂರಿ ಯೋಜನೆ ಜಾರಿಗೆ ಆಗ್ರಹಿಸಿ 2013ರಲ್ಲಿ ರೈಲು ತಡೆ ನಡೆಸಿದ್ದ ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ಹುಬ್ಬಳ್ಳಿ ಪೊಲೀಸರು ಬಂಧಿಸಿ ಕೋರ್ಟ್ಗೆ ಹಾಜರುಪಡಿಸಿದ್ದು, ಇಂದು (ಸೆಪ್ಟೆಂಬರ್ 28) ಹುಬ್ಬಳ್ಳಿ ಜೆಎಂಎಫ್ಸಿ ನ್ಯಾಯಾಲಯವು ಕೋಡಿಹಳ್ಳಿ ಚಂದ್ರಶೇಖರ್ ಅವರಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ. ಕಳಸಾ ಬಂಡೂರಿ ಯೋಜನೆ ಜಾರಿಗೆ ಆಗ್ರಹಿಸಿ ಕೋಡಿಹಳ್ಳಿ ಚಂದ್ರಶೇಖರ್ ಅವರು 2013ರಲ್ಲಿ 6 ಗಂಟೆಗಳ ಕಾಲ ರೈಲುಗಳನ್ನು ತಡೆದು ಪ್ರತಿಭಟನೆ ನಡೆಸಿದ್ದರು. ಈ ಸಂಬಂಧ ಚಂದ್ರಶೇಖರ್ ವಿರುದ್ಧ FIR ದಾಖಲಾಗಿತ್ತು. ಇದೀಗ ಈ ಪ್ರಕರಣದಲ್ಲಿ ಪೊಲೀಸರು ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ಬಂಧಿಸಿದ್ದರು. ಇದೀಗ ಕೋರ್ಟ್, 14 ದಿನ ನ್ಯಾಯಾಂಗ ಬಂಧನ ವಿಧಿಸಿದ್ದರಿಂದ ಅವರನ್ನು ಹುಬ್ಬಳ್ಳಿ ಉಪಕಾರಾಗೃಹಕ್ಕೆ ಶಿಫ್ಟ್ ಮಾಡಲಾಗಿದೆ.

