ರೈತ ಹೋರಾಟಗಾರ ಕೋಡಿಹಳ್ಳಿ ಚಂದ್ರಶೇಖರ್​​ಗೆ​​ 14 ದಿನ ನ್ಯಾಯಾಂಗ ಬಂಧನ, ಇಲ್ಲಿದೆ ಕೇಸಿನ ವಿವರ

Edited By:

Updated on: Sep 28, 2026 | 3:33 PM

ಕಳಸಾ ಬಂಡೂರಿ ಯೋಜನೆ ಜಾರಿಗೆ ಆಗ್ರಹಿಸಿ 2013ರಲ್ಲಿ ರೈಲು ತಡೆ ನಡೆಸಿದ್ದ ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ಹುಬ್ಬಳ್ಳಿ ಪೊಲೀಸರು ಬಂಧಿಸಿ ಕೋರ್ಟ್​​ಗೆ ಹಾಜರುಪಡಿಸಿದ್ದು, ಇಂದು (ಸೆಪ್ಟೆಂಬರ್ 28) ಹುಬ್ಬಳ್ಳಿ ಜೆಎಂಎಫ್​ಸಿ ನ್ಯಾಯಾಲಯವು ಕೋಡಿಹಳ್ಳಿ ಚಂದ್ರಶೇಖರ್​ ಅವರಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ.

ಹುಬ್ಬಳ್ಳಿ, ಸೆಪ್ಟೆಂಬರ್ 28): ಕಳಸಾ ಬಂಡೂರಿ ಯೋಜನೆ ಜಾರಿಗೆ ಆಗ್ರಹಿಸಿ 2013ರಲ್ಲಿ ರೈಲು ತಡೆ ನಡೆಸಿದ್ದ ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ಹುಬ್ಬಳ್ಳಿ ಪೊಲೀಸರು ಬಂಧಿಸಿ ಕೋರ್ಟ್​​ಗೆ ಹಾಜರುಪಡಿಸಿದ್ದು, ಇಂದು (ಸೆಪ್ಟೆಂಬರ್ 28) ಹುಬ್ಬಳ್ಳಿ ಜೆಎಂಎಫ್​ಸಿ ನ್ಯಾಯಾಲಯವು ಕೋಡಿಹಳ್ಳಿ ಚಂದ್ರಶೇಖರ್​ ಅವರಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ. ಕಳಸಾ ಬಂಡೂರಿ ಯೋಜನೆ ಜಾರಿಗೆ ಆಗ್ರಹಿಸಿ ಕೋಡಿಹಳ್ಳಿ ಚಂದ್ರಶೇಖರ್ ಅವರು 2013ರಲ್ಲಿ 6 ಗಂಟೆಗಳ ಕಾಲ ರೈಲುಗಳನ್ನು ತಡೆದು ಪ್ರತಿಭಟನೆ ನಡೆಸಿದ್ದರು. ಈ ಸಂಬಂಧ ಚಂದ್ರಶೇಖರ್​​ ವಿರುದ್ಧ FIR ದಾಖಲಾಗಿತ್ತು. ಇದೀಗ ಈ ಪ್ರಕರಣದಲ್ಲಿ ಪೊಲೀಸರು ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ಬಂಧಿಸಿದ್ದರು. ಇದೀಗ ಕೋರ್ಟ್, 14 ದಿನ ನ್ಯಾಯಾಂಗ ಬಂಧನ ವಿಧಿಸಿದ್ದರಿಂದ ಅವರನ್ನು ಹುಬ್ಬಳ್ಳಿ ಉಪಕಾರಾಗೃಹಕ್ಕೆ ಶಿಫ್ಟ್ ಮಾಡಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಸಂಜಯ್ಯಾ ಚಿಕ್ಕಮಠ

ಸಂಜಯ್ಯಾ ಚಿಕ್ಕಮಠ. ಹುಟ್ಟಿದ್ದು ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ರಾಮನಾಳ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 14 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್​ನಿಂದ ಆರಂಭವಾದ ವೃತ್ತಿ ಬದುಕು, ಕಲಬುರಗಿ, ಕೊಪ್ಪಳದಿಂದ ಇದೀಗ ಹುಬ್ಬಳ್ಳಿಗೆ ಬಂದಿದ್ದು, ಉತ್ತರ ಕರ್ನಾಟಕ ಪ್ರಮುಖ ವಾಣಿಜ್ಯ ನಗರ ಹುಬ್ಬಳ್ಳಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಕೃಷಿ ನನ್ನಿಷ್ಟ.ಆದ್ರೆ ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More