ಹುಬ್ಬಳ್ಳಿಯಲ್ಲಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿಯ ಕುಂದಗೋಳ ರಸ್ತೆಯ ಶೆರೆವಾಡ ಬಳಿ ಭೀಕರ ಅಪಘಾತ ಸಂಭವಿಸಿದೆ. ಕೆಟ್ಟು ನಿಂತಿದ್ದ ಜೆಸಿಬಿ ರಿಪೇರಿ ಮಾಡುತ್ತಿದ್ದ ವ್ಯಕ್ತಿಗೆ ಅತಿ ವೇಗದ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಸದಾನಂದ ಅವರ ರುಂಡ ಮುಂಡ ಬೇರೆಯಾಗಿ ಇಂಜಿನ್ ಒಳಗೆ ಸಿಲುಕಿದೆ. ಕಾರಿನಲ್ಲಿದ್ದ ಐವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಹುಬ್ಬಳ್ಳಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹುಬ್ಬಳ್ಳಿ, ಏಪ್ರಿಲ್ 22: ಭೀಕರ ರಸ್ತೆ ಅಪಘಾತದಲ್ಲಿ ಕಾರು ಡಿಕ್ಕಿ ಹೊಡೆದ ರಭಸಕ್ಕೆ ವ್ಯಕ್ತಿಯ ರುಂಡವೇ ಬೇರ್ಪಟ್ಟ ಭಯಾನಕ ಘಟನೆ ಜಿಲ್ಲೆಯ ಕುಂದಗೋಳ ರಸ್ತೆಯ ಶೆರೆವಾಡ ಗ್ರಾಮದ ಬಳಿ ನಿನ್ನೆ ಸಂಜೆ ನಡೆದಿದೆ. ಶೆರೆವಾಡ ಗ್ರಾಮದ ನಿವಾಸಿ ಸದಾನಂದ ಕಟೇಗಾರ (32) ಮೃತ ವ್ಯಕ್ತಿ. ತಾಂತ್ರಿಕ ದೋಷದಿಂದಾಗಿ ಜೆಸಿಬಿ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿತ್ತು. ಸದಾನಂದ ಕೆಳಗೆ ಬಾಗಿ ಜೆಸಿಬಿಯನ್ನು ರಿಪೇರಿ ಮಾಡುತ್ತಿದ್ದ ಸಂದರ್ಭದಲ್ಲಿ, ವೇಗವಾಗಿ ಬಂದ ಕಾರೊಂದು ನಿಯಂತ್ರಣ ತಪ್ಪಿ ನೇರವಾಗಿ ಅವರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ರುಂಡವು ದೇಹದಿಂದ ಸಂಪೂರ್ಣವಾಗಿ ಕತ್ತರಿಸಿ, ಕಾರಿನ ಮುಂಭಾಗದ ಇಂಜಿನ್ ಒಳಗೆ ಹೋಗಿ ಸಿಲುಕಿತ್ತು. ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
