ಹುಬ್ಬಳ್ಳಿ ಈದ್ಗಾ ಮೈದಾನ ರಾಮಾವತಾರ ಗಣೇಶ ಮೆರವಣಿಗೆಯ ವಿಡಿಯೋ ನೋಡಿ

|

Updated on: Sep 07, 2024 | 12:30 PM

ದಶಕಗಳ ಹೋರಾಟದ ಫಲವಾಗಿ ಹುಬ್ಬಳ್ಳಿಯ ಚೆನ್ನಮ್ಮ ಮೈದಾನ (ಈದ್ಗಾ ಮೈದಾನ)ದಲ್ಲಿ ಗಣೇಶ ಪ್ರತಿಷ್ಠಾಪಿಸಲು ಅನುಮತಿ ನೀಡಲಾಗಿದೆ. ಕಳೆದ ಎರಡು ವರ್ಷಗಳಿಂದ ಗಣೇಶ ಪ್ರತಿಷ್ಠಾಪಿಸಲಾಗುತ್ತಿದೆ. ಈ ವರ್ಷವೂ ಚೆನ್ನಮ್ಮ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪಿಸಲಾಗಿದೆ. ಗಣೇಶ ಮೆರವಣಿಗೆಯ ವಿಡಿಯೋ ನೋಡಿ.

ಹುಬ್ಬಳ್ಳಿ, ಆಗಸ್ಟ್​​ 07: ದಶಕಗಳ ಹೋರಾಟದ ಫಲವಾಗಿ ಹುಬ್ಬಳ್ಳಿಯ ಚೆನ್ನಮ್ಮ ಮೈದಾನ (ಈದ್ಗಾ ಮೈದಾನ)ದಲ್ಲಿ ಗಣೇಶ (Hubballi Idgah Maidan Ganesh) ಪ್ರತಿಷ್ಠಾಪಿಸಲು ಅನುಮತಿ ನೀಡಲಾಗಿದೆ. ಕಳೆದ ಎರಡು ವರ್ಷಗಳಿಂದ ಗಣೇಶ ಪ್ರತಿಷ್ಠಾಪಿಸಲಾಗುತ್ತಿದೆ. ಈ ವರ್ಷವೂ ಚೆನ್ನಮ್ಮ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪಿಸಲಾಗಿದೆ. ಈ ವರ್ಷ ವಿಶೇಷವಾಗಿ ಶ್ರೀರಾಮನ ಅವತಾರದ ಗಣೇಶ ವಿಗ್ರಹವನ್ನು ಪ್ರತಿಷ್ಠಾಪಿಸಲಾಗಿದೆ. ಗಣೇಶ ಪ್ರತಿಷ್ಠಾಪನೆಗೂ ಮುನ್ನ ಮೂರುಸಾವಿರ ಮಠದಿಂದ ಚೆನ್ನಮ್ಮ ಮೈದಾನದವರಗೆ ಭವ್ಯ ಮೆರವಣಿಗೆ ನಡೆಯಿತು. ಡಿಜೆ, ವಿವಿಧ ವಾದ್ಯಮೇಳಗಳಿಗೆ ಜನರು ಕುಣಿದು ಕುಪ್ಪಳಿಸಿದರು.

ಚೆನ್ನಮ್ಮ ಮೈದಾನ ಗಣೇಶ ಮೆರವಣಿಗೆ ಉದ್ದಕ್ಕೂ ಪೊಲೀಸ್​ ಭದ್ರತೆ ಇತ್ತು. ಚೆನ್ನಮ್ಮ ಮೈದಾನದ ಸುತ್ತಮುತ್ತ ಪೊಲೀಸ್, ಅರೆಸೇನೆಯನ್ನು ನಿಯೋಜಿಸಲಾಗಿದೆ. ಮೈದಾನದ ಸುತ್ತ ಸಿಸಿ ಕ್ಯಾಮರಾ ಅಳವಡಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ