ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್ ಭರಿಸಲಾಗದೆ ವಿವೇಕಾನಂದ ಕುಟುಂಬ ಕಂಗಾಲು
ಹುಬ್ಬಳ್ಳಿಯ ಮಾನ್ಯಾ ಘಟನೆ ಸಂಬಂಧ, ಆಕೆಯ ಕುಟುಂಬದ ಆಸ್ಪತ್ರೆ ಬಿಲ್ ಪಾವತಿಸದ ಜಿಲ್ಲಾಡಳಿತದ ವಿರುದ್ಧ ದಲಿತ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಡಿಸಿ ಸೇರಿದಂತೆ ಅಧಿಕಾರಿಗಳು ಕುಟುಂಬಕ್ಕೆ ನೆರವು ನೀಡುವಲ್ಲಿ ನಿರ್ಲಕ್ಷ್ಯ ತೋರಿದ್ದಾರೆಂದು ಆರೋಪಿಸಿ, ಸರ್ಕಾರವೇ ಆಸ್ಪತ್ರೆ ಬಿಲ್ ಭರಿಸಬೇಕು ಎಂದು ಆಗ್ರಹಿಸಿದ್ದಾರೆ.
ಹುಬ್ಬಳ್ಳಿ, ಡಿಸೆಂಬರ್ 23: ಪ್ರೀತಿಸಿ ಅಂತರ್ಜಾತಿ ವಿವಾಹವಾಗಿದ್ದಕ್ಕೆ ತಂದೆಯಿಂದಲೇ ಮಗಳ ಮರ್ಯಾದಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆ ನಡೆದು 2 ದಿನ ಕಳೆದರೂ ಸರ್ಕಾರ ಸ್ಪಂದಿಸಿಲ್ಲ. ಹೀಗಾಗಿ ರಾಜ್ಯ ಸರ್ಕಾರ ಮತ್ತು ಜಿಲ್ಲಾಡಳಿತದ ವಿರುದ್ಧ ದಲಿತ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ. ಕುಟುಂಬ ಸದಸ್ಯರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ ಸಂತ್ರಸ್ತ ಕುಟುಂಬವು ಆಸ್ಪತ್ರೆ ಬಿಲ್ ಪಾವತಿಸಲು ಪರದಾಡುವಂತ್ತಾಗಿದೆ. ಡಿಸಿ ಸೇರಿದಂತೆ ಅಧಿಕಾರಿಗಳು ಕುಟುಂಬಕ್ಕೆ ನೆರವು ನೀಡುವಲ್ಲಿ ನಿರ್ಲಕ್ಷ್ಯ ತೋರಿದ್ದಾರೆಂದು ಆರೋಪ ಕೇಳಿಬಂದಿದೆ. ಸರ್ಕಾರವೇ ಆಸ್ಪತ್ರೆ ಬಿಲ್ ಭರಿಸಬೇಕು ಎಂದು ಆಗ್ರಹಿಸಲಾಗಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Latest Videos
CM ಕುರ್ಚಿ ಕದನ:ಡಿಕೆಶಿ ಹಿಂದೆನೇ ದೆಹಲಿಗೆ ತೆರಳಿದ ಸ್ವಾಮೀಜಿ ಹೇಳಿದ್ದಿಷ್ಟು
ಡಿಕೆಶಿ ದಿಲ್ಲಿಗೆ ಹೋಗುತ್ತಿದ್ದಂತೆಯೇ ಇತ್ತ ಅಹಿಂದ ಸಮಾವೇಶಕ್ಕೆ ಸಿದ್ಧತೆ
ಹುಬ್ಬಳ್ಳಿ ಮರ್ಯಾದಾ ಹತ್ಯೆ: ಗರ್ಭಿಣಿ ಕೊಂದ 24 ಗಂಟೆಯಲ್ಲೇ ಅರೆಸ್ಟ್
ಧರ್ಮದ ಸಂರಕ್ಷಕರಾಗಲು ಆರ್ಎಸ್ಎಸ್ಗೆ ಯಾರು ಅಧಿಕಾರ ನೀಡಿದ್ದು
