AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿ ಕೆಎಂಸಿ ಆಸ್ಪತ್ರೆಯಲ್ಲಿ ಭ್ರಷ್ಟಾಚಾರ: ಡಿ ಗ್ರೂಪ್ ಸಿಬ್ಬಂದಿ ಮಂಜುಳಾ, ಸುನಂದಾ ಅಮಾನತುಗೊಳಿಸಿ ಆದೇಶ

ಹುಬ್ಬಳ್ಳಿ ಕೆಎಂಸಿ ಆಸ್ಪತ್ರೆಯಲ್ಲಿ ಭ್ರಷ್ಟಾಚಾರ: ಡಿ ಗ್ರೂಪ್ ಸಿಬ್ಬಂದಿ ಮಂಜುಳಾ, ಸುನಂದಾ ಅಮಾನತುಗೊಳಿಸಿ ಆದೇಶ

ಸಂಜಯ್ಯಾ ಚಿಕ್ಕಮಠ
| Edited By: |

Updated on: Sep 20, 2026 | 11:21 AM

Share

ಹುಬ್ಬಳ್ಳಿ ಕೆಎಂಸಿ ಹೆರಿಗೆ ವಾರ್ಡ್‌ನಲ್ಲಿ ಅಕ್ರಮವಾಗಿ ಹಣ ವಸೂಲಿ ಮಾಡುತ್ತಿದ್ದ ಆರೋಪದ ಮೇಲೆ ಇಬ್ಬರು ಡಿ-ಗ್ರೂಪ್ ಸಿಬ್ಬಂದಿಗಳಾದ ಮಂಜುಳಾ ಮತ್ತು ಸುನಂದಾ ಅವರನ್ನು ಕಿಮ್ಸ್ ಆಡಳಿತ ಮಂಡಳಿ ಅಮಾನತುಗೊಳಿಸಿದೆ. ಸೆಪ್ಟೆಂಬರ್ 18 ರಂದು ಟಿವಿ9 ವರದಿ ಪ್ರಸಾರವಾದ ನಂತರ ಅಧಿಕಾರಿಗಳು ಪರಿಶೀಲಿಸಿ ಕ್ರಮ ಕೈಗೊಂಡಿದ್ದಾರೆ.

ಹುಬ್ಬಳ್ಳಿ, ಸೆಪ್ಟೆಂಬರ್ 20: ಕೆಎಂಸಿ ಆಸ್ಪತ್ರೆಯ ಹೆರಿಗೆ ವಾರ್ಡ್‌ನಲ್ಲಿ ಹಣ ವಸೂಲಿ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಇಬ್ಬರು ಡಿ-ಗ್ರೂಪ್ ಸಿಬ್ಬಂದಿಗಳಾದ ಮಂಜುಳಾ ಮತ್ತು ಸುನಂದಾ ಅವರನ್ನು ಅಮಾನತುಗೊಳಿಸಿ ಕಿಮ್ಸ್ ಆಡಳಿತ ಮಂಡಳಿ ಆದೇಶ ಹೊರಡಿಸಿದೆ. ಹೆರಿಗೆ ವಾರ್ಡ್‌ಗೆ ಒಳಬಿಡಲು ಸಾರ್ವಜನಿಕರಿಂದ ಒತ್ತಾಯ ಪೂರ್ವಕವಾಗಿ ಹಣ ಪಡೀತಾ ಇದ್ದರು ಎಂಬ ಆರೋಪದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ಸೆಪ್ಟೆಂಬರ್ 18 ರಂದು ಈ ಕುರಿತು ಟಿವಿ9 ಕನ್ನಡ ವಾಹಿನಿಯಲ್ಲಿ ವರದಿ ಪ್ರಸಾರವಾಗಿತ್ತು. ವರದಿಯ ನಂತರ ಅಧಿಕಾರಿಗಳು ಈ ಪ್ರಕರಣದ ಬಗ್ಗೆ ತೀವ್ರ ಪರಿಶೀಲನೆ ನಡೆಸಿದರು. ಹೆರಿಗೆ ವಾರ್ಡ್‌ಗೆ ಪ್ರವೇಶಿಸಲು ಪ್ರತಿ ಬಾರಿಯೂ ನಿಗದಿತ ಹಣ ನೀಡುವಂತೆ ಸಿಬ್ಬಂದಿ ಬೇಡಿಕೆ ಇಡುತ್ತಿದ್ದರು ಎಂದು ಸಾರ್ವಜನಿಕರು ದೂರು ನೀಡಿದ್ದರು. ಈ ಕುರಿತು ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಸಾರ್ವಜನಿಕರು ಹಣ ಕೊಟ್ಟು ಸಾಕಾಗಿದ್ದಾರೆಂದು ಆರೋಪಿಸಿದ್ದರು. ಅಧಿಕಾರಿಗಳ ಪರಿಶೀಲನೆಯ ನಂತರ ಮಂಜುಳಾ ಮತ್ತು ಸುನಂದಾ ಇಬ್ಬರ ವಿರುದ್ಧವೂ ಕ್ರಮ ಕೈಗೊಂಡು, ಅವರನ್ನು ಅಮಾನತುಗೊಳಿಸಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಂಜಯ್ಯಾ ಚಿಕ್ಕಮಠ
ಸಂಜಯ್ಯಾ ಚಿಕ್ಕಮಠ

ಸಂಜಯ್ಯಾ ಚಿಕ್ಕಮಠ. ಹುಟ್ಟಿದ್ದು ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ರಾಮನಾಳ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 14 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್​ನಿಂದ ಆರಂಭವಾದ ವೃತ್ತಿ ಬದುಕು, ಕಲಬುರಗಿ, ಕೊಪ್ಪಳದಿಂದ ಇದೀಗ ಹುಬ್ಬಳ್ಳಿಗೆ ಬಂದಿದ್ದು, ಉತ್ತರ ಕರ್ನಾಟಕ ಪ್ರಮುಖ ವಾಣಿಜ್ಯ ನಗರ ಹುಬ್ಬಳ್ಳಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಕೃಷಿ ನನ್ನಿಷ್ಟ.ಆದ್ರೆ ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More