Sign In

By signing in or creating an account, you agree with Associated Broadcasting Company's Terms & Conditions and Privacy Policy.

Hubballi News: ಬಸ್ಸಿನಲ್ಲಿ ವೃದ್ದೆಗೆ ಕಪಾಳ‌ಮೋಕ್ಷ ಮಾಡಿದ ಕಂಡಕ್ಟರ್, ವಿಡಿಯೋ ವೈರಲ್

Hubballi News: ಬಸ್ಸಿನಲ್ಲಿ ವೃದ್ದೆಗೆ ಕಪಾಳ‌ಮೋಕ್ಷ ಮಾಡಿದ ಕಂಡಕ್ಟರ್, ವಿಡಿಯೋ ವೈರಲ್

ರಮೇಶ್ ಬಿ. ಜವಳಗೇರಾ
|

Updated on: Jun 23, 2023 | 11:34 AM

ಶಕ್ತಿ ಯೋಜನೆ ಜಾರಿಗೆ ಬಂದಾಗಿನಿಂದ ಬಸ್ ನಿರ್ವಾಹಕ-ಚಾಲ ಹಾಗೂ ಪ್ರಯಾಣಿಕರ ನಡುವೆ ಗಲಾಟೆಗಳು ಹೆಚ್ಚಾಗುತ್ತಿವೆ. ಈ ಬಗ್ಗೆ ಕೆಎಸ್​ಆರ್​ಟಿಸಿ ತಮ್ಮ ಸಿಬ್ಬಂದಿಗೆ ಎಚ್ಚರಿಕೆ ನೀಡಿದರೂ ಪದೇ ಪದೇ ಜಗಳ ಪ್ರಕರಣಗಳು ಮರುಕಳಿಸುತ್ತಲೇ ಇವೆ. ಇದೀಗ ಲೇಡಿ ಕಂಡಕ್ಟರ್​ ವೃದ್ಧೆಯೊಬ್ಬರಿಗೆ ಕಪಾಳಕ್ಕೆ ಹೊಡೆದಿರುವ ವಿಡಿಯೋ ವೈರಲ್ ಆಗಿದೆ.

ಹುಬ್ಬಳ್ಳಿ: ಮಹಿಳಾ ಪ್ರಯಾಣಿಕರಿಗೆ ಉಚಿತವಾಗಿ ಪ್ರಯಾಣಿಸುವ ಬಗ್ಗೆ ಅಪಹಾಸ್ಯ ಮಾಡುವುದು, ಇನ್ನಿತರೆ ರೀತಿಯಲ್ಲಿ ಮಹಿಳೆಯರೊಂದಿಗೆ ಅಗೌರವದಿಂದ ನಡೆದುಕೊಳ್ಳುತ್ತಿರುವ ಬಗ್ಗೆ ದೂರುಗಳು ಬಂದಲ್ಲಿ ಅಂತಹ ಬಸ್ ನಿರ್ವಾಹಕ ಅಥವಾ ಚಾಲಕರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಸಾರಿಗೆ ಇಲಾಖೆ (Karnataka Transport Dept) ಸುತ್ತೋಲೆ ಹೊರಡಿಸಿದೆ. ಆದರೂ ಮಹಿಳಾ ಕಂಡಕ್ಟರ್​ ಒಬ್ಬರು ವೃದ್ದೆಗೆ ಕಪಾಳ‌ಮೋಕ್ಷ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಕುಂದಗೋಳದಿಂದ ಹುಬ್ಬಳ್ಳಿ ಕಡೆ ಹೊರಟಿದ್ದ ಬಸ್ ನಲ್ಲಿ ‌ಕ್ಷುಲ್ಲಕ ಕಾರಣಕ್ಕೆ ಮಾತಿಗೆ ಮಾತು ಬೆಳೆದಿದ್ದು, ಕೊನೆಗೆ ಮಹಿಳಾ ಕಂಡಕ್ಟರ್, ಅಜ್ಜಿಯ ಕಪಾಳಕ್ಕೆ ಹೊಡೆದಿದ್ದಾರೆ. ತನ್ನ ಅಜ್ಜಿಯ ವಯಸ್ಸಿನ ಮಹಿಳೆಯ ಮೇಲೆ ಈ ರೀತಿ ಹಲ್ಲೆ ಮಾಡಿರುವ ಮಹಿಳಾ ನಿರ್ವಹರು ನಡೆಗೆ ಬಸ್ಸಿನಲ್ಲಿದ್ದ ಪ್ರಯಾಣಿಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇನ್ನು ಈ ವಿಡಿಯೋ ವೈರಲ್ ಆಗಿದ್ದು, ಕಂಡಕ್ಟರ್​ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ.