ಹತ್ತೇ ನಿಮಿಷದಲ್ಲಿ ಉಳಿಯಿತು ಇನ್ನೂರು ಮಕ್ಕಳ ಜೀವ: ಹುಬ್ಬಳ್ಳಿ ಭಂಡಿವಾಡದಲ್ಲಿ ತಪ್ಪಿದ ಭಾರೀ ಅನಾಹುತ

Edited By:

Updated on: Jun 16, 2026 | 11:57 AM

ಹುಬ್ಬಳ್ಳಿಯ ಭಂಡಿವಾಡ ಗ್ರಾಮದಲ್ಲಿ ಭಾರಿ ಬಿರುಗಾಳಿಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೇಲ್ಚಾವಣಿ ಶೀಟ್‌ಗಳು ಹಾರಿಹೋಗಿವೆ. ಶಾಲೆ ಮುಗಿದ ಕೆಲವೇ ನಿಮಿಷಗಳಲ್ಲಿ ಘಟನೆ ನಡೆದಿದ್ದರಿಂದ 200ಕ್ಕೂ ಹೆಚ್ಚು ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇದರಿಂದಾಗಿ ಭಾರಿ ದುರಂತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದೆ. ಘಟನಾ ಸ್ಥಳದಲ್ಲಿ ಪರಿಸ್ಥಿತಿ ಹೇಗಿದೆ ಎಂಬ ವಿಡಿಯೋ ಇಲ್ಲಿದೆ.

ಹುಬ್ಬಳ್ಳಿ, ಜೂನ್ 16: ಹುಬ್ಬಳ್ಳಿ ತಾಲೂಕಿನ ಭಂಡಿವಾಡ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ಭಾರೀ ಅನಾಹುತ ಕೂದಲೆಳೆ ಅಂತರದಲ್ಲಿ ತಪ್ಪಿದೆ. ಏಕಾಏಕಿ ಬೀಸಿದ ಭಾರೀ ಗಾಳಿಗೆ ಶಾಲೆಯ ಮೇಲ್ಚಾವಣಿಯ ಶೀಟ್‌ಗಳು ಹಾರಿಹೋಗಿವೆ. ಅದೃಷ್ಟವಶಾತ್, ಶಾಲೆ ಮುಗಿದ ಹತ್ತೇ ನಿಮಿಷಗಳಲ್ಲಿ ಈ ಘಟನೆ ಸಂಭವಿಸಿದ್ದರಿಂದ 200ಕ್ಕೂ ಹೆಚ್ಚು ಮಕ್ಕಳು ಯಾವುದೇ ಅಪಾಯವಿಲ್ಲದೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸೋಮವಾರ ಸಂಜೆ 4:50 ರಿಂದ 5 ಗಂಟೆಯ ಸಮಯದಲ್ಲಿ (ಶಾಲೆ ಬಿಟ್ಟ ನಂತರ) ಕೇವಲ ಐದರಿಂದ ಹತ್ತು ನಿಮಿಷಗಳಲ್ಲಿ ಬಿರುಗಾಳಿ ಬೀಸಿದೆ. ಗಾಳಿಯ ತೀವ್ರತೆಗೆ ಶಾಲೆಯ ಎಲ್ಲಾ ಕೊಠಡಿಗಳ ಮೇಲ್ಚಾವಣಿ ಶೀಟ್‌ಗಳು ಹಾರಿಹೋಗಿದ್ದು, ಸುಮಾರು 300-400 ಮೀಟರ್ ದೂರದವರೆಗೆ ಬಿದ್ದಿವೆ. ಕೆಲವು ವಸ್ತುಗಳು ಸುತ್ತಮುತ್ತಲಿನ ಮನೆಗಳು ಮತ್ತು ಮರಗಳ ಮೇಲೆ ಬಿದ್ದಿವೆ. ಶಾಲೆಯ ಆವರಣದಲ್ಲಿದ್ದ ಅನೇಕ ವಸ್ತುಗಳು ಹಾನಿಗೊಳಗಾಗಿವೆ. ಸಮಯಕ್ಕೆ ಸರಿಯಾಗಿ ಮಕ್ಕಳು ಶಾಲೆ ಬಿಟ್ಟು ಹೋಗಿದ್ದರಿಂದ ಭಾರೀ ಅನಾಹುತ ತಪ್ಪಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Jun 16, 2026 11:06 AM
Follow Us
ಸಂಜಯ್ಯಾ ಚಿಕ್ಕಮಠ

ಸಂಜಯ್ಯಾ ಚಿಕ್ಕಮಠ. ಹುಟ್ಟಿದ್ದು ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ರಾಮನಾಳ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 14 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ನಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಕೊಪ್ಪಳಕ್ಕೆ ಬಂದು ನಿಂತಿದೆ. ಕೃಷಿ ನನ್ನಿಷ್ಟ.ಆದ್ರೆ ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More