ಆರೋಪಿ ಫಯಾಜ್ ಜಾಮೀನು ಅರ್ಜಿ ವಜಾ: ನೇಹಾ ಆತ್ಮಕ್ಕೆ ಶಾಂತಿ ಸಿಕ್ತು ಎಂದ ತಂದೆ

Updated on: Aug 04, 2025 | 8:27 PM

ನೇಹಾ ಹಿರೇಮಠ (Neha Hiremath) ಹತ್ಯೆ ಆರೋಪಿ ಫಯಾಜ್ (Accused Fayaz) ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹುಬ್ಬಳ್ಳಿ (Hubballi) ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ವಜಾಗೊಳಿಸಿದೆ. ನ್ಯಾಯಾಧೀಶರಾದ ಪಲ್ಲವಿ ಬಿಆರ್ ಮಹತ್ವದ ಆದೇಶ ನೀಡಿದ್ದಾರೆ. ಕಳೆದ ಒಂದು ವರ್ಷ ನಾಲ್ಕು ತಿಂಗಳಿಂದಲೂ ಧಾರವಾಡ (Dharwad) ಕೇಂದ್ರ ಕಾರಾಗೃಹದಲ್ಲಿರುವ ಆರೋಪಿ ಫಯಾಜ್ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರಾಗಿದ್ದ. ಇನ್ನು ಕೋರ್ಟ್ ಜಾಮೀನು ಅರ್ಜಿ ವಜಾಗೊಳಿಸಿದ್ದಕ್ಕೆ ನೇಹಾ ತಂದೆ ಸಂತಸ ವ್ಯಕ್ತಪಡಿಸಿದ್ದಾರೆ.

ಹುಬ್ಬಳ್ಳಿ, (ಆಗಸ್ಟ್ 04): ನೇಹಾ ಹಿರೇಮಠ (Neha Hiremath) ಹತ್ಯೆ ಆರೋಪಿ ಫಯಾಜ್ (Accused Fayaz) ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹುಬ್ಬಳ್ಳಿ (Hubballi) ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ವಜಾಗೊಳಿಸಿದೆ. ನ್ಯಾಯಾಧೀಶರಾದ ಪಲ್ಲವಿ ಬಿಆರ್ ಮಹತ್ವದ ಆದೇಶ ನೀಡಿದ್ದಾರೆ. ಕಳೆದ ಒಂದು ವರ್ಷ ನಾಲ್ಕು ತಿಂಗಳಿಂದಲೂ ಧಾರವಾಡ (Dharwad) ಕೇಂದ್ರ ಕಾರಾಗೃಹದಲ್ಲಿರುವ ಆರೋಪಿ ಫಯಾಜ್ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರಾಗಿದ್ದ. ಇನ್ನು ಕೋರ್ಟ್ ಜಾಮೀನು ಅರ್ಜಿ ವಜಾಗೊಳಿಸಿದ್ದಕ್ಕೆ ನೇಹಾ ತಂದೆ ಸಂತಸ ವ್ಯಕ್ತಪಡಿಸಿದ್ದಾರೆ.

ಆರೋಪಿ ಫಯಾಜ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಕೋರ್ಟ್  ವಜಾ ಮಾಡಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ನೇಹಾ ತಂದೆ ನಿರಂಜನ ಹಿರೇಮಠನಮಗೆ ಮೊದಲ ಜಯ ಸಿಕ್ಕಿದೆ, ನೇಹಾ ಆತ್ಮಕ್ಕೆ ಶಾಂತಿ ಸಿಕ್ಕಿದೆ. ವಾಮಮಾರ್ಗದ ಮೂಲಕ ಜಾಮೀನು ಪಡೆಯಲು ಯತ್ನ ನಡೆದಿತ್ತು. ಮತ್ತೆ ಯಾರ ಕೊಲೆಗೆ ಸಂಚು ರೂಪಿಸಿದ್ದನೋ ಏನೋ. ಎಲ್ಲರ ಹೋರಾಟಕ್ಕೆ ಮೊದಲ ಹಂತದಲ್ಲಿ ನ್ಯಾಯ ಸಿಕ್ಕಿದೆ. ನಮಗೆ ನ್ಯಾಯ ಸಿಗುತ್ತದೆ ಅನ್ನೋ ಭರವಸೆ ಮೂಡಿದೆ. ಆರೋಪಿ ಫಯಾಜ್​ಗೆ ಬೇಗನೆ ಗಲ್ಲು ಶಿಕ್ಷೆಯಾಗಬೇಕು ಎಂದರು.

Published on: Aug 04, 2025 08:27 PM